ಸಮಾಜವಾದಿ ಪಕ್ಷದ ಮುಖಂಡ ಅಝಂ ಖಾನ್‌ ಗೆ ಕೋವಿಡ್‌ ಸೋಂಕು | ಆರೋಗ್ಯ ಗಂಭೀರ; ಆಮ್ಲಜನಕ ಅಳವಡಿಕೆ

Prasthutha|

ಲಖನೌ : ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಝಂ ಖಾನ್‌ ಕೋವಿಡ್‌ ಸೋಂಕಿಗೆ ತುತ್ತಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರಿಗೆ ಆಮ್ಲಜನಕ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದು ಅವರನ್ನು ದಾಖಲಿಸಲಾಗಿರುವ ಲಖನೌ ಮೇದಾಂತ ಆಸ್ಪತ್ರೆ ತಿಳಿಸಿದೆ.

- Advertisement -

ಅಝಂ ಖಾನ್‌ ಅವರ ಆರೋಗ್ಯ ಗಂಭೀರವಾಗಿದೆ. ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದ್ದು, ಆಸ್ಪತ್ರೆಯ ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಝಂ  ಖಾನ್‌ ಶ್ವಾಸಕೋಶದಲ್ಲಿ ಸೋಂಕು ಕಂಡುಬಂದ ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ. ಸೀತಾಪುರ ಜೈಲಿನಿಂದ ಅಝಂ ಖಾನ್‌ ಮತ್ತು ಅವರ ಪುತ್ರನನ್ನು ಮೇ ೯ರಂದು ಕೋವಿಡ್‌ ಚಿಕಿತ್ಸೆಗಾಗಿ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.



Join Whatsapp