ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಸುಪ್ರೀಂ ಕೋರ್ಟ್‌’ಗೆ ಮಹುವಾ ಅರ್ಜಿ

- Advertisement -

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ತೀವ್ರವಾಗಿ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ಕ್ರಮಕ್ಕೆ ಹಲವರ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಆಯೋಗದ ಆದೇಶ ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್‌ ನಾಯಕಿ ಮತ್ತು ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

‘ಈಗಾಗಲೇ ಪಟ್ಟಿಯಲ್ಲಿ ಹೆಸರಿರುವ, ಹಲವು ಬಾರಿ ಮತದಾನ ಮಾಡಿರುವವರನ್ನು ತಮ್ಮ ಅರ್ಹತೆ ಸಾಬೀತುಪಡಿಸುವಂತೆ ಸೂಚಿಸಲಾಗುತ್ತಿದೆ. ದಾಖಲೆ ನೀಡದವರನ್ನು ಪಟ್ಟಿಯಿಂದ ಕೈಬಿಡುವ ಅಪಾಯವಿದೆ. ಇತರೆ ರಾಜ್ಯಗಳಲ್ಲೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಮಾಡದಂತೆ ಆಯೋಗಕ್ಕೆ ನಿರ್ದೇಶನ ನೀಡಬೇಕು’ ಎಂದು ಅರ್ಜಿಯಲ್ಲಿ ಕೋರಿದ್ದಾರೆ.

- Advertisement -


Must Read

Related Articles