ಯುವತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪ: ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಗ್ಯಾಂಗ್​; 8 ಜನರ ಬಂಧನ

- Advertisement -

ಬೆಂಗಳೂರು: ಗ್ಯಾಂಗ್​ ವೊಂದು ಯುವಕನೋರ್ವನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

- Advertisement -

ಈ ಸಂಬಂಧ ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕನಿಗೆ ಥಳಿಸಿದ ವಿಡಿಯೋಗಳು ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದ್ದವು.

ಘಟನೆ ಹಿನ್ನೆಲೆ: ಕುಶಾಲ್ ಎಂಬಾತ ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಆದರೆ ಯುವತಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಲವ್ ಬ್ರೇಕಪ್ ಮಾಡಿಕೊಂಡಿದ್ದಳು. ಇದರಿಂದ ಕೆರಳಿದ ಕುಶಾಲ್​ ಆಕೆಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂಬ ಆರೋಪ ಕೇಳಿ ಬಂದಿದೆ.

- Advertisement -

ಇನ್ನು ಯುವತಿ ಈ ವಿಚಾರವನ್ನು ತನ್ನ ಸ್ನೇಹಿತರಿಗೆ ತಿಳಿಸಿದ್ದಳು. ನಂತರ ಮಾತುಕತೆಗೆಂದು ಕುಶಾಲ್​ನನ್ನು ಕರೆಸಿಕೊಂಡ ಗ್ಯಾಂಗ್,​ ಆತನನ್ನ ಕಿಡ್ನಾಪ್ ಮಾಡಿ ಅಲೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಹಲ್ಲೆಯ ದೃಶ್ಯ ಮೊಬೈಲ್​ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಕುಶಾಲ್ ಅಪಹರಣ ಸಂಬಂಧ ಪೋಷಕರು ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದರು.

- Advertisement -


Must Read

Related Articles