ಬಿಜೆಪಿ ಸರಕಾರ ಹಿಂಬಾಗಿಲಿನಿಂದ ಸಿಎಎ ಜಾರಿಗೆ ತರಲು ಹೊರಟಿರುವ ಕ್ರಮವನ್ನು ಖಂಡಿಸಿ ಎಸ್ ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ ಕೆ ಫೈಝಿ ಜೂನ್ ಒಂದರಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ 185ಕ್ಕೂ ಅಧಿಕ ಕಡೆಗಳಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ.
ಇಂದು ಬೆಳಿಗ್ಗೆ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಎಸ್ ಡಿಪಿಐ ಕಾರ್ಯಕರ್ತರು, ನಾಯಕರು ಬೆಂಬಲಿಗರು ತಮ್ಮ ತಮ್ಮ ಪ್ರದೇಶದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಭಿತ್ತಿಪತ್ರ ಪ್ರದರ್ಶಿಸಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ರಾಷ್ಟ್ರೀಯ ನಾಯಕರಾದ ರಿಯಾಝ್ ಫರಂಗಿಪೇಟೆ, ರಾಜ್ಯ ಮುಖಂಡರಾದ ಅಶ್ರಫ್ ಮಾಚಾರ್, ಇಕ್ಬಾಲ್ ಬೆಳ್ಳಾರೆ, ಜಿಲ್ಲಾ ಉಪಾಧ್ಯಕ್ಷ ರಾದ ಇಕ್ಬಾಲ್ ಐಎಂಆರ್, ಪ್ರದಾನ ಕಾರ್ಯದರ್ಶಿ ಶಾಹುಲ್ ಹಮೀದ್, ಕಾರ್ಯದರ್ಶಿಗಳಾದ ಅನ್ವರ್ ಸಾದತ್ ಬಜತ್ತೂರು, ಜಮಾಲ್ ಜೋಕಟ್ಟೆ, ಅಶ್ರಫ್ ಮಂಚಿ ಜಿಲ್ಲಾ ಮುಖಂಡರಾದ ಲ್ಯಾನ್ಸೀ ತೋರಸ್ ,ಎಲ್ಲಾ ಕ್ಷೇತ್ರ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.