ಸುಪ್ರೀಂ ಕೋರ್ಟ್ ಮತ್ತು ಕಾಂಗ್ರೆಸ್ ಹೋರಾಟದಿಂದಾಗಿ ಉಚಿತ ಲಸಿಕೆ ದೊರೆಯುವಂತಾಯಿತು : ಡಿ.ಕೆ ಶಿವಕುಮಾರ್

Prasthutha|

ಬೆಂಗಳೂರು : ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಉಚಿತ ಲಸಿಕೆ ನೀಡುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ‘ಇದು ಕಾಂಗ್ರೆಸ್ ಪಕ್ಷದ ಹೋರಾಟ. ದೇಶದ ಎಲ್ಲ ವಿರೋಧ ಪಕ್ಷಗಳು ಸೇರಿ, ಲಸಿಕೆ ನೀಡುವ ಜವಾಬ್ದಾರಿ ರಾಜ್ಯ ಸರ್ಕಾರಗಳದ್ದಲ್ಲ. ಭಾರತ ಸರ್ಕಾರ ಇದರ ಜವಾಬ್ದಾರಿ ಹೊರಬೇಕು ಎಂದು ಒತ್ತಾಯ ಮಾಡುತ್ತಿದ್ದೆವು. ನಾವು ನಮ್ಮ ಅಭಿಯಾನ ಆರಂಭಿಸಿ, ರಾಜ್ಯಪಾಲರನ್ನು ಭೇಟಿಯಾಗಿ, ಅವರ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ರವಾನಿಸಲಾಗಿತ್ತು. ಜಿಲ್ಲಾ ಮಟ್ಟದಿಂದಲೂ ಒತ್ತಾಯ ಮಾಡಲಾಗಿತ್ತು. ಇದೆಲ್ಲಕ್ಕಿಂತ ಮುಖ್ಯವಾಗಿ ಸುಪ್ರೀಂಕೋರ್ಟ್ ಕೊಟ್ಟ ಸೂಚನೆಗಳಿಗೆ ಎಲ್ಲರ ಪರವಾಗಿ ತಲೆಬಾಗಿ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಪ್ರಜಾಪ್ರಭುತ್ವ ಉಳಿಸಿ, ಆಡಳಿತ ವ್ಯವಸ್ಥೆ ಉಳಿಸಲು, ಜನರ ನೋವು ಅಳಿಸಿ, ಅವರ ಜೀವ ರಕ್ಷಿಸಲು ಸುಪ್ರೀಂಕೋರ್ಟ್ ತೆಗೆದುಕೊಂಡ ನಿರ್ಣಯ ಮಹತ್ವದ್ದಾಗಿದೆ’ ಎಂದರು.

- Advertisement -

ಆಕ್ಸಿಜನ್ ಹಂಚಿಕೆಯಿಂದ ಲಸಿಕೆ ಹಾಕುವವರೆಗೂ ಕೋವಿಡ್ ಪರಿಸ್ಥಿತಿ ನಿರ್ವಹಣೆಯ ಪ್ರತಿಯೊಂದು ವಿಷಯದಲ್ಲೂ ನ್ಯಾಯಾಲಯಗಳೇ ಸರಕಾರಕ್ಕೆ ಆದೇಶ, ಸೂಚನೆ ಕೊಡಬೇಕಾಗಿ ಬಂದದ್ದು ಆಡಳಿತ ವೈಫಲ್ಯಕ್ಕೆ ಬಹುದೊಡ್ಡ ಸಾಕ್ಷಿ ಎಂದು ಛೇಡಿಸಿದರು.

ಏಪ್ರಿಲ್ ನಲ್ಲಿ ನಡೆದ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜಯ ಸಾಧಿಸಿದ ಬಸನಗೌಡ ತುರುವಿಹಾಳ್ ಅವರು ಕೋವಿಡ್ ಪೀಡಿತರಾಗಿದ್ದ ಕಾರಣ ತಡವಾಗಿ ಅಂದರೆ ಇಂದು ವಿಧಾನಸೌಧದಲ್ಲಿ ವಿಧಾನಸಭೆ ಸ್ಪೀಕರ್ ಅವರಿಂದ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಿವಕುಮಾರ್ ಅವರು, ಬಸವನಗೌಡ ತುರುವಿಹಾಳ್ ಅವರನ್ನು ಸನ್ಮಾನಿಸಿ, ಮಾತನಾಡಿದರು

Join Whatsapp