ತಾಲೂಕಿನಲ್ಲಿ ಕೋವಿಡ್ -19 ಎಂಬ ಮಹಾಮಾರಿ ರೋಗವನ್ನು ತಡೆಗಟ್ಟುವಲ್ಲಿ ಶಾಸಕರು ಮತ್ತು ತಾಲೂಕು ಆಡಳಿತ ಸಂಪೂರ್ಣ ವಿಫಲ : ಎ ರಾಜಶೇಖರ್ ನಾಯಕ್

Prasthutha|

ದೇವದುರ್ಗ: ತಾಲ್ಲೂಕಿನಲ್ಲಿ ಕೋವಿಡ್ 19 ತಡೆಗಟ್ಟುವಲ್ಲಿ ಶಾಸಕರು ಮತ್ತು ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಮುಖಂಡ ಎ ರಾಜಶೇಖರ ನಾಯಕ ಹೇಳಿದರು.

- Advertisement -

ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಕರೋನ ನೆಪವನ್ನೊಡ್ಡಿ ಶಾಸಕರು ಸರ್ವಜನಿಕರ ಹಣವನ್ನು ಲೂಟಿ ಹೊಡೆಯುತ್ತಿದ್ದಾರೆ. ಭ್ರಷ್ಟಾಚಾರ ತಾಂಡವಾಡುತ್ತಿದ್ದು ಅಧಿಕಾರಿಗಳು ಶಾಸಕರ ಕೈಗೊಂಬೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕರುಗಳು ಪ್ರಶ್ನಿಸಿದರೆ ಅವರ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಕೇಸು ದಾಖಲಿಸಿದ್ದಾರೆ. ತಾಲ್ಲೂಕಿನಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಮುಂಬರುವ ಚುನಾವಣೆಗಳಲ್ಲಿ ಜನರೇ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಮಸ್ಕಿಯಲ್ಲಿ ಆದ ಪರಿಸ್ಥಿತಿ ಇವರಿಗೂ ಆಗಲಿದೆ. ಅಧಿಕಾರಿ ವರ್ಗವನ್ನು ದುರುಪಯೋಗ ಪಡಿಸಿಕೊಳ್ಳುತಿದ್ದಾರೆ. ದಾಖಲೆಗಳನ್ನು ಸಂಗ್ರಹಿಸುತ್ತಿದ್ದು ಅತಿ ಶೀಘ್ರದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದರು.
ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಝೀಜ್ ,ತಾಲ್ಲೂಕು ಪಂಚಾಯಿತಿ ಸದಸ್ಯ ಗೋವಿಂದ ನಾಯಕ್, ನಾಗರಾಜ ಪಾಟೀಲ್, ರಂಗಪ್ಪ ಗೋಸಾಲ್,ಪುರಸಭೆ ಸದಸ್ಯರುಗಳಾದ ಗುಂಡಪ್ಪ, ಮಾನಪ್ಪ ಮೇಸ್ತ್ರಿ ಮತ್ತು ಕಾಂಗ್ರೆಸ್ ಮುಖಂಡರುಗಳು ಭಾಗವಹಿಸಿದ್ದರು.

ವರದಿ :- ನಿರಂಜನ ಮಸರಕಲ್

- Advertisement -



Join Whatsapp