ನವದೆಹಲಿ : ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂ. ಗಡಿ ದಾಟಿ ತಿಂಗಳುಗಳೇ ಕಳೆದಿವೆ. ಆದರೆ, ಇಂದು ಇದೇ ಮೊದಲ ಬಾರಿ ರಾಜಸ್ಥಾನದ ಗಂಗಾ ನಗರದಲ್ಲಿ ಡೀಸೆಲ್ ಬೆಲೆಯೂ ಲೀಟರ್ ಗೆ 100 ರೂ. ಗಡಿ ದಾಟಿದೆ.
ಇಂದಿನ ಏರಿಕೆಯ ಬಳಿಕ ಡೀಸೆಲ್ ಬೆಲೆ ಲೀಟರ್ ಗೆ 100.23 ರೂ. ಆಗಿದೆ. ಡೀಸೆಲ್ ಬೆಲೆ ಕೂಡ ರಾಜಸ್ಥಾನ, ಮಧ್ಯಪ್ರದೇಶದ ಹಲವು ನಗರಗಳಲ್ಲಿ 100 ರೂ. ಗಡಿ ತಲುಪಲು ಇನ್ನು ಕೆಲವೇ ರೂ.ಗಳು ಬಾಕಿಯಿದೆ.
ಮಧ್ಯಪ್ರದೇಶ, ರಾಜಸ್ಥಾನದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 106 ರೂ. ದಾಟಿದೆ. ಮಧ್ಯಪ್ರದೇಶದ ಎಲ್ಲಾ ನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಇನ್ನುಳಿದಂತೆ ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿವೆ. ಕರ್ನಾಟಕದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ.