ರಾಮಮಂದಿರ ದೇಣಿಗೆಯಲ್ಲಿ ಅವ್ಯವಹಾರ, ಭಕ್ತರ ನಂಬಿಕೆಗೆ ಮಾಡಿದ ದ್ರೋಹ: ಪ್ರಿಯಾಂಕಾ ಕಿಡಿ

Prasthutha|

ರಾಮಮಂದಿರಕ್ಕಾಗಿ ಸಂಗ್ರಹಿಸಿದ ಹಣದಲ್ಲಿ ಅವ್ಯವಹಾರ ನಡೆಸಿರುವುದು ಭಕ್ತರ ನಂಬಿಕೆಗೆ ಮಾಡಿದ ದ್ರೋಹ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸೋಮವಾರ ಟೀಕಾಪ್ರಹಾರ ನಡೆಸಿದ್ದಾರೆ.

- Advertisement -


ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಉಸ್ತುವಾರಿ ವಹಿಸಿರುವ ರಾಮಮಂದಿರ ಟ್ರಸ್ಟ್ ಜಮೀನು ಖರೀದಿಯಲ್ಲಿ ಅವ್ಯವಹಾರ ನಡೆಸಿದೆ ಎಂದು ಎಎಪಿ ಮತ್ತು ಎಸ್ ಪಿ ಮುಖಂಡರು ಆರೋಪ ಮಾಡಿದ ಬೆನ್ನಲ್ಲೇ ಪ್ರಿಯಾಂಕಾ ಈ ಹೇಳಿಕೆ ನೀಡಿದ್ದಾರೆ.
“ಕೋಟ್ಯಂತರ ಜನರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ದೇವರಿಗೆ ತಮ್ಮ ಕಾಣಿಕೆಗಳನ್ನು ಸಲ್ಲಿಸುತ್ತಾರೆ. ಈ ದೇಣಿಗೆಗಳನ್ನು ದುರುಪಯೋಗಪಡಿಸಿಕೊಳ್ಳುವುದು ಅನ್ಯಾಯ ಮತ್ತು ಪಾಪದ ಕೆಲಸವಾಗಿದೆ. ಮಾತ್ರವಲ್ಲ ಅವರ ನಂಬಿಕೆಗೆ ಮಾಡಿದ ಅವಮಾನ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.


ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜಮೀನು ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಎಎಪಿಯ ರಾಜ್ಯ ಸಭಾ ಸದಸ್ಯ ಸಂಜಯ್ ಸಿಂಗ್ ಮತ್ತು ಸಮಾಜವಾದಿ ಪಕ್ಷದ ಮುಖಂಡ ಪವನ್ ಪಾಂಡೆ ಆರೋಪಿಸಿದ್ದಾರೆ.
2 ಕೋಟಿ ರೂ. ಬೆಲೆ ಬಾಳುವ ಜಮೀನನ್ನು 18.5 ಕೋಟಿಗೆ ಖರೀದಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.



Join Whatsapp