ದೆಹಲಿ ಗಲಭೆ ಪ್ರಕರಣ: ವಿದ್ಯಾರ್ಥಿ ನಾಯಕರಾದ ಆಸಿಫ್, ಕಲಿತಾ, ನತೇಶ್ ಗೆ ಜಾಮೀನು ನೀಡಿದ ಹೈಕೋರ್ಟ್

Prasthutha|

ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಯುಎಪಿಎ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ವಿದ್ಯಾರ್ಥಿ ನಾಯಕರಾದ ದೇವಂಗನಾ ಕಲಿತಾ ಮತ್ತು ನತೇಶ್ ನರ್ವಾಲ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

- Advertisement -


ಈಶಾನ್ಯ ದೆಹಲಿಯಲ್ಲಿ ನಡೆದ ಕೋಮು ಗಲಭೆಗೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಎಂದ ಸಂಘಟನೆಯ ಸದಸ್ಯರಾದ ಕಲಿತಾ ಮತ್ತು ನರ್ವಾಲ್ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದರು. ಗಲಭೆ, ಕಾನೂನುಬಾಹಿರ ಸಭೆ ಮತ್ತು ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಗಲಭೆಯಲ್ಲಿ “ಪೂರ್ವನಿಯೋಜಿತ ಪಿತೂರಿಯ” ಭಾಗವೆಂದು ಆರೋಪಿಸಿ ಅವರನ್ನು ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಲಾಗಿತ್ತು.



Join Whatsapp