ಗುಜರಾತ್ ನ ವಡೋದರಾ ಬಳಿ ಸೇತುವೆ ಕುಸಿತ: ಮೃತರ ಸಂಖ್ಯೆ 9ಕ್ಕೆ ಏರಿಕೆ

- Advertisement -

ಅಹಮದಾಬಾದ್: ಗುಜರಾತ್‌ ರಾಜ್ಯದ ವಡೋದರಾ ಜಿಲ್ಲೆಯ ಮುಜ್‌ಪುರ ಬಳಿಯ ನಾಲ್ಕು ದಶಕಗಳಷ್ಟು ಹಳೆಯದಾದ ಗಂಭೀರಾ ಸೇತುವೆಯ ಒಂದು ಭಾಗ ಇಂದು ಬುಧವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ಹಲವಾರು ವಾಹನಗಳು ನದಿಗೆ ಬಿದ್ದು, ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಯಾವುದೇ ಮುನ್ಸೂಚನೆ ಸಿಗದೆ ಸೇತುವೆ ಏಕಾಏಕಿ ಕುಸಿದು ಬಿದ್ದಿದ್ದು, ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ಕೆಲವೇ ನಿಮಿಷಗಳಲ್ಲಿ, ಗ್ರಾಮಸ್ಥರು ಸುದ್ದಿ ಮುಟ್ಟಿಸಿ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಐವರನ್ನು ರಕ್ಷಿಸಿ ಮೇಲೆತ್ತಿದರು.

ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಯಲ್ಲಿ ಗಂಭೀರಾ ಸೇತುವೆಯ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ. ಸೇತುವೆಯನ್ನು 1985 ರಲ್ಲಿ ನಿರ್ಮಿಸಲಾಗಿತ್ತು. ಅದರ ನಿರ್ವಹಣೆಯನ್ನು ಅಗತ್ಯವಿದ್ದಾಗ ನಿಯತಕಾಲಿಕವಾಗಿ ಮಾಡಲಾಗುತ್ತಿತ್ತು ಎನ್ನುತ್ತಾರೆ.

- Advertisement -


Must Read

Related Articles