ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಕುಮಾರಣ್ಣ; ನಿಖಿಲ್

- Advertisement -

ಚಿಕ್ಕಬಳ್ಳಾಪುರ: ದೇಶಕ್ಕೆ ನರೇಂದ್ರ ಮೋದಿ, ರಾಜ್ಯಕ್ಕೆ ಕುಮಾರಣ್ಣ ಎನ್ನುವ ಮೂಲಕ ಕುಮಾರಸ್ವಾಮಿ ಮತ್ತೆ ಸಿಎಂ ಆಗಬೇಕು ಅಂತ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

- Advertisement -

ಗೌರಿಬಿದನೂರಿನಲ್ಲಿ ಜನರೊಂದಿಗೆ ಜೆಡಿಎಸ್ ಸದಸ್ಯತ್ವ ಅಭಿಯಾನದ ಕಾರ್ಯಕ್ರಮದ ಅಂಗವಾಗಿ ವೇದಿಕೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಸಿಎಂ ಆಗಬೇಕು ಎಂಬ ಇಂಗಿತ ಹೊರಹಾಕಿದರು.

ಇದು ಕೇವಲ ಜೆಡಿಎಸ್ ಕಾರ್ಯಕರ್ತರ ಭಾವನೆ ಅಷ್ಟೇ ಅಲ್ಲ, ರಾಜ್ಯದ ಜನರ ಭಾವನೆ. ಕುಮಾರಣ್ಣ ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆಗಳನ್ನ ಜನ ಈಗಲೂ ಸ್ಮರಿಸಿಕೊಳ್ಳುತ್ತಿದ್ದಾರೆ. ಅಂತಹ ವ್ಯಕ್ತಿ ಸಿಎಂ ಆದರೆ ರಾಜ್ಯದಲ್ಲಿ ಸಮೃದ್ಧಿಯ ವಾತವಾರಣ ನಿರ್ಮಾಣವಾಗಲಿದೆ. ನಾನು ರಾಜ್ಯದ ನಾನಾ ಕಡೆ ಪ್ರವಾಸ ಮಾಡಿದಾಗ, ಜನ ಕುಮಾರಣ್ಣ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ ಎಂದರು.

- Advertisement -


Must Read

Related Articles