ಲಾಕ್ ಡೌನ್ ಸಡಿಲಿಕೆ: ಜನಜೀವನ ಸಹಜಸ್ಥಿತಿಯೆಡೆಗೆ

Prasthutha|

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಇಂದಿನಿಂದ ಜಾರಿಯಾಗಿದ್ದು, ಜನಜೀವನ ಸಹಜ ಸ್ಥಿತಿಯೆಡೆಗೆ ಮರಳುತ್ತಿದೆ. ದಕ್ಷಿಣ ಕನ್ನಡ ಸೇರಿದಂತೆ 13 ಜಿಲ್ಲೆಗಳಲ್ಲಿ ಭಾಗಶಃ ಸಡಿಲಿಕೆಯಾಗಿದೆ.
54 ದಿನಗಳ ನಂತರ ಬೆಂಗಳೂರಿನಲ್ಲಿ ಮೆಟ್ರೊ ಮತ್ತು ಬಿಎಂಟಿಸಿ ಬಸ್ ಸಂಚಾರ ಆರಂಭಗೊಂಡಿದ್ದು, ಮೊದಲ ದಿನ ಕಡಿಮೆ ಸಂಖ್ಯೆಯಲ್ಲಿ ಬಸ್ ರಸ್ತೆಗಿಳಿದಿದ್ದರಿಂದ ಪ್ರಯಾಣಿಕರು ಬಸ್ ಗಾಗಿ ಕಾಯುತ್ತಿದ್ದ ದೃಶ್ಯ ಕಂಡುಬಂತು.

- Advertisement -


ಶೇಕಡಾ 50ರಷ್ಟು ಮಾತ್ರ ಸೀಟು ಭರ್ತಿ ಮಾಡಿಕೊಂಡು ಹೋಗಬೇಕೆಂಬ ಸರ್ಕಾರದ ಕೋವಿಡ್ ನಿಯಮ ಪ್ರಯಾಣಿಕರಿಗೆ, ಸಾರಿಗೆ ಇಲಾಖೆ ಸಿಬ್ಬಂದಿಗೆ ಸಂಕಷ್ಟು ತಂದೊಡ್ಡಿದೆ.


ಮೈಸೂರು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭಗೊಂಡಿದೆ. ಬೆಂಗಳೂರಿನಲ್ಲಿ ಬೆಳಗ್ಗೆ 7ಗಂಟೆಯಿಂದ 11 ಗಂಟೆಯವರೆಗೆ ಮಧ್ಯಾಹ್ನ 3ರಿಂದ ಸಂಜೆ 6 ಗಂಟೆಯವರೆಗೆ ಪ್ರತಿ 5 ನಿಮಿಷಗಳಿಗೊಮ್ಮೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೊ ಸಂಚಾರ ಆರಂಭಗೊಂಡಿದೆ.



Join Whatsapp