ಜಮ್ಮು- ಕಾಶ್ಮೀರದಲ್ಲಿ ಅಪರಾಧ ಕಾನೂನನ್ನು ಜಾರಿಗೊಳಿಸಿದ್ದು, ಅದನ್ನು ಮುಂದಿನ ಸಂಸತ್ ಅಧಿವೇಶನದಲ್ಲಿ ರದ್ದುಗೊಳಿಸಿ ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಇರುವ ಏಕೈಕ ಮಾರ್ಗ ಎಂದರೆ ಜಮ್ಮು-ಕಾಶ್ಮೀರದಲ್ಲಿ ಜಾರಿಗೊಸಿರುವ ಅಪರಾಧ ಕಾನೂನನ್ನು ರದ್ದುಗೊಳಿಸಲು ಮುಂದಿನ ಸಂಸತ್ ಅಧಿವೇಶನದಲ್ಲಿ ಕ್ರಮ ಕೈಗೊಳ್ಳುವುದು” ಎಂದಿದ್ದಾರೆ.
ಇನ್ನು ಸಂವಿಧಾನ ಬದ್ಧ ಹಕ್ಕನ್ನು ಸಂಸತ್ನಲ್ಲಿ ಕಾಯ್ದೆಗೆ ತಿದ್ದುಪಡಿ ಮಾಡಿ ಮಾರ್ಪಾಡು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಮ್ಮು ಕಾಶ್ಮೀರ ಬೆಳವಣಿಗೆ ಕುರಿತು ಚರ್ಚಿಸಲು ಜೂನ್.24 ರಂದು 14 ಪಕ್ಷಗಳ ಮುಖಂಡರ ಸಭೆ ಕರೆದಿರುವ ಬೆನ್ನಲ್ಲೆ ಚಿದಂಬರಂ ಈ ಹೇಳಿಕೆ ನೀಡಿದ್ದಾರೆ