ಮಹಾರಾಷ್ಟ್ರ: ಮಾಜಿ ಸಚಿವ ಅನಿಲ್‌ ದೇಶ್ಮುಖ್ ನಿವಾಸದ ಮೇಲೆ ಈಡಿ ದಾಳಿ

Prasthutha|

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್ಮುಖ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ, ಶೋಧಕಾರ್ಯ ನಡೆಸಿದ್ದಾರೆ.

- Advertisement -

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ದೇಶಮುಖ್ ವಿರುದ್ಧ ಮಾಡಿದ ಲಂಚದ ಆರೋಪಗಳನ್ನು ಪರಿಶೀಲಿಸುವಂತೆ ಸೂಚಿಸಿರುವ ಬಾಂಬೆ ಹೈಕೋರ್ಟ್‌ನ ಆದೇಶದ ಮೇರೆಗೆ ಮೊದಲ ಬಾರಿಗೆ CBI ಅನಿಲ್‌ ದೇಶಮುಖ್ ಅವರನ್ನು ಪ್ರಾಥಮಿಕ ವಿಚಾರಣೆ ನಡೆಸಿತ್ತು. ನಂತರ ಇ.ಡಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಇದೀಗ ಸಚಿವರ ನಿವಾಸದ ಮೇಲೆ ದಾಳಿ ನಡೆಸಿದೆ.

‘ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್‌ಎ) ಪ್ರಕಾರ ಮಾಜಿ ಸಚಿವ ಅನಿಲ್ ದೇಶ್ಮುಖ್ ಅವರ ನಾಗಪುರದ ನಿವಾಸ ಸೇರಿದಂತೆ ಕೆಲವು ಭಾಗಗಳಲ್ಲಿ ಶೋಧಕಾರ್ಯ ಕೈಗೊಳ್ಳಲಾಗಿದೆ’ ಎಂದು ತನಿಖಾ ಸಂಸ್ಥೆ ತಿಳಿಸಿದೆ.

- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಅಧಿಕಾರಿಗಳು ಕಳೆದ ತಿಂಗಳು ಅನಿಲ್‌ ದೇಶ್ಮುಖ್ ಸೇರಿದಂತೆ ಇತರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.



Join Whatsapp