ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಹಂಜಿನ್ ರಾಜ್ ಪೊರಾ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದು ಯೋಧರೊಬ್ಬರು ಹುತಾತ್ಮಗೊಂಡಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಉಗ್ರರ ಇರುವಿಕೆ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸಲು ಆರಂಭಿಸಿದರು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ಮಳೆಗೈಯಲು ಆರಂಭಿಸಿದರು. ಪೊಲೀಸರು ಮತ್ತು ಸೇನಾಪಡೆ ಜಂಟಿಯಾಗಿ ಇಂದು ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿತ್ತು.
ಉಗ್ರರ ಇರುವಿಕೆ ಬಗ್ಗೆ ಖಚಿತವಾಗಿ ಮಾಹಿತಿ ಪಡೆದ ಪೊಲೀಸರು ಉಗ್ರರನ್ನು ಶರಣಾಗುವಂತೆ ಕೇಳಿಕೊಂಡರೂ ಒಪ್ಪದೆ ದಾಳಿ ನಡೆಸಿದಾಗ ಎನ್ ಕೌಂಟರ್ ಏರ್ಪಟ್ಟಿತು. ನಾಲ್ಕು ಮಂದಿ ಉಗ್ರರು ಸಿಕ್ಕಿಹಾಕಿಕೊಂಡಿದ್ದು, ಇನ್ನೂ ಕಾರ್ಯಾಚರಣೆ ಮುಂದುವರಿದಿದೆ.