ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ

Prasthutha|

ಉತ್ತರಾಖಂಡ: ಉತ್ತರಾಖಂಡ ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ಶನಿವಾರ ಪುಷ್ಕರ್ ಸಿಂಗ್ ಧಾಮಿಯ ಹೆಸರನ್ನು ಅಂತಿಮಗೊಳಿಸಿದೆ. ಶುಕ್ರವಾರವಷ್ಟೇ ಮುಖ್ಯಮಂತ್ರಿ ಥೀರತ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದರು. ಡೆಹ್ರಾಡೂನ್‌ನಲ್ಲಿ ನಡೆದ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಧಾಮಿಯನ್ನು ಆಯ್ಕೆ ಮಾಡಲಾಗಿದೆ.

- Advertisement -


ಪುಷ್ಕರ್ ಸಿಂಗ್ ಧಾಮಿಯನ್ನು ಇಂದು ಉತ್ತರಾಖಂಡ ಬಿಜೆಪಿ ಶಾಸಕಾಂಗ ಪಕ್ಷವು ರಾಜ್ಯದ ಹನ್ನೊಂದನೇ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದೆ. ಸೆಪ್ಟೆಂಬರ್ 10 ರೊಳಗೆ ರಾಜ್ಯ ವಿಧಾನಸಭೆಗೆ ಚುನಾಯಿತರಾಗಲು ಅಸಾಧ್ಯವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಥೀರತ್ ಸಿಂಗ್ ರಾವತ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಈ ಆಯ್ಕೆ ನಡೆದಿದೆ.


ರಾಜಧಾನಿ ಡೆಹ್ರಾಡೂನ್ ನ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದು ಉತ್ತರಾಖಂಡದ 57 ಬಿಜೆಪಿ ಶಾಸಕರು ಸಭೆ ಸೇರಿದ ನಂತರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆಪ್ತರಾಗಿರುವ ಧಾಮಿ ಅವರ ಹೆಸರನ್ನು ಇಂದು ಘೋಷಿಸಲಾಯಿತು.

- Advertisement -


45 ವರ್ಷದ ಧಾಮಿ ಅವರು ಎರಡು ಬಾರಿ ಖತಿಮಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರು ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭಗತ್ ಸಿಂಗ್ ಕೊಶಿಯಾರಿಯವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.



Join Whatsapp