ಮಂಡ್ಯ: ಮದುವೆಯಾದರೆ ಬೇರೆ ಬೇರೆಯಾಗುತ್ತೇವೆ ಎಂಬ ಆತಂಕದ ಕಾರಣಕ್ಕೆ ಅವಳಿ ಸೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಹಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿಯ ಪುತ್ರಿಯರಾದ ದೀಪಿಕಾ ಮತ್ತು ದಿವ್ಯಾ (19 ವರ್ಷ) ಆತ್ಮಹತ್ಯೆ ಮಾಡಿಕೊಂಡ ಸೋದರಿಯರಾಗಿದ್ದಾರೆ.
ಚಿಕ್ಕ ವಯಸ್ಸಿನಿಂದ ಈ ಸೋದರಿಯರು ಅನ್ಯೋನ್ಯವಾಗಿದ್ದು ಒಬ್ಬರನ್ನೊಬ್ಬರು ಬಿಟ್ಟಿರಲಿಲ್ಲ. ಆದರೆ ಇದೀಗ ಪೋಷಕರು ಇಬ್ಬರನ್ನೂ ಬೇರೆ ಬೇರೆ ಮನೆಗೆ ವಿವಾಹ ಮಾಡಿಕೊಡಲು ತೀರ್ಮಾನಿಸಿದ್ದಾರೆ. ಇದರಿಂದ ತಾವು ಬೇರೆಯಾಗುತ್ತೇವೆ ಎಂದು ಆತಂಕಗೊಂಡ ಇಬ್ಬರೂ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.