ಮಂಗಳೂರು: ಪುತ್ತೂರಿನಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಮೂವರು ಆರೋಪಿಗಳಿಗೆ ಒಂದೇ ದಿನದಲ್ಲಿ ಪುತ್ತೂರಿನ ಪ್ರಥಮ ದರ್ಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರದಂದು ನಟ್ಟಣಿಗೆ ಮುಡ್ನೂರು ಗ್ರಾಮದ ಕೊಟ್ಯಾಡಿ ನಿವಾಸಿ ಶಾಫಿ (34), ಸವಣೂರು ಗ್ರಾಮದ ಮತ್ತಿಕೆರೆಯ ಮಹಮ್ಮದ್ ಅಝರುದ್ದೀನ್(30), ಸವಣೂರು ಗ್ರಾಮದ ಮಾಂತೂರು ನಿವಾಸಿ ನಝೀರ್(38) ಎಂಬವರನ್ನು ಪೊಲೀಸರು ಬಂಧಿಸಿದ್ದರು.
ಬಂಧಿತ ಮೂವರು ಆರೋಪಿಗಳಿಗೂ ಪುತ್ತೂರಿನ ಪ್ರಥಮ ದರ್ಜೆ ನ್ಯಾಯಾಲಯ ಷರತ್ತುಬದ್ಧ ಮಧ್ಯಾಂತರ ಜಾಮೀನು ಮಂಜೂರು ಮಾಡಿದೆ.