IMA ಬಹುಕೋಟಿ ವಂಚನೆ ಪ್ರಕರಣ| ರಾಜ್ಯ ಸರ್ಕಾರದಿಂದ ರೋಷನ್ ಬೇಗ್ ಆಸ್ತಿ ಜಪ್ತಿ

Prasthutha|

ಬೆಂಗಳೂರು: IMA ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ರೋಷನ್ ಬೇಗ್ ಅವರ ಆಸ್ತಿಯನ್ನು ಬುಧವಾರ (ಜುಲೈ 7) ರಂದು ರಾಜ್ಯ ಸರ್ಕಾರ ಜಪ್ತಿ ಮಾಡಿದೆ.

- Advertisement -

IMA ಪ್ರಕರಣಕ್ಕೆ ಸಂಬಂಧಿಸಿದಂತೆ, 36ನೇ ಆರೋಪಿಯಾಗಿರುವ ಮಾಜಿ ಸಚಿವ ರೋಷನ್ ಬೇಗ್‌ʼಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್ ಜಪ್ತಿ ಮಾಡಲಾಗಿದೆ. ಆದ್ರೆ, ಎಷ್ಟು ಪ್ರಮಾಣದ ಆಸ್ತಿಯನ್ನ ಜಪ್ತಿ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ.

ಮಾಜಿ ಸಚಿವ ರೋಷನ್ ಬೇಗ್, IMA ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ಅಕ್ರಮವಾಗಿ ಹಣ ಪಡೆದಿರುವುದು ಸಾಬೀತಾದ ನಂತರ ಇವರ ಆಸ್ತಿ ಮುಟ್ಟುಗೋಲಿಗೆ ನ್ಯಾಯಲಯ ಆದೇಶಿಸಿತ್ತು. ಅದ್ರಂತೆ, ಸರ್ಕಾರ ಇಂದು ಆಸ್ತಿ ಮುಟ್ಟುಗೋಲು ಮಾಡಿದೆ.

- Advertisement -

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಬೇಗ್‌ ಅವರನ್ನು 2020ರ ನವೆಂಬರ್ 22 ರಂದು ಸಿಬಿಐ ಬಂಧಿಸಿತ್ತು. ನಂತರ ಜಾಮೀನಿನ ಮೇಲೆ ಅವರು ಬಿಡುಗಡೆಗೊಂಡಿದ್ದರು.



Join Whatsapp