ದಕ್ಷಿಣ ಭಾರತದ ಮೊದಲ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಮಂಗಳೂರಿನಲ್ಲಿ ಚಾಲನೆ

Prasthutha|

ಮಂಗಳೂರು : ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಭಾನುವಾರ ಸಂಸದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಿದರು.ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಹಾಗೂ ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದರು.

- Advertisement -

ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಹೊಂದಿದೆ. ಅಗಲವಾದ, ದೊಡ್ಡ ಕಿಟಕಿಗಳು ಪ್ರಯಾಣಿಕರಿಗೆ ಸ್ಪಷ್ಟವಾದ ನೋಟವನ್ನು ನೀಡುತ್ತದೆ. ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್ಎಚ್ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್ಫಾರ್ಮ್ / ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿದೆ. ಈ ಬೋಗಿಗಳು ಗಾಜಿನ ಮೇಲ್ಚಾವಣಿ ಹೊಂದಿದ್ದು, ಇದು ಬೇಸಿಗೆಯಲ್ಲೂ ಆಕಾಶದ ಸ್ಪಷ್ಟ ನೋಟಗಳನ್ನು ನೀಡುತ್ತದೆ. ಇದರಿಂದ ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ 56 ಕಿಮೀ. ಉದ್ದದ ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯ, ನದಿ, ತೊರೆ, ಜಲಪಾತಗಳು ಸೊಬಗನ್ನು ಪ್ರಯಾಣಿಕರು ಆಸ್ವಾದಿಸಲು ಸಾಧ್ಯವಾಗುತ್ತದೆ.

- Advertisement -

ಕೋಚ್ ಗಳಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆಗಳು, ಎಲ್ಇಡಿ, ಓವನ್ ಮತ್ತು ರೆಫ್ರಿಜರೇಟರ್, ಮಿನಿ ಪ್ಯಾಂಟ್ರಿ, ಮಲ್ಟಿ-ಟೈರ್ಡ್ ಸ್ಟೀಲ್ ಲಗೇಜ್ ಕಪಾಟುಗಳು, ಪ್ರತಿ ಸೀಟಿನಲ್ಲಿ ಮೊಬೈಲ್ ಚಾಜಿರ್ಂಗ್ ಸಾಕೆಟ್ ಗಳಿವೆ. ಇದಲ್ಲದೆ, ಕೋಚ್ ಸ್ವಯಂಚಾಲಿತ ಸ್ಲೈಡಿಂಗ್ ಬಾಗಿಲುಗಳು ಮತ್ತು ಜೈವಿಕ ಶೌಚಾಲಯಗಳನ್ನು ಹೊಂದಿದೆ.



Join Whatsapp