ಅಸ್ಸಾಂ ನಲ್ಲಿ ಜಾನುವಾರು ಸಂರಕ್ಷಣಾ ಕಾಯ್ದೆ ಜಾರಿಗೆ

Prasthutha|

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಶ್ವಾ ಶರ್ಮಾ ಜಾನುವಾರು ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಇಂದು ನಡೆದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಜಾನುವಾರು ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ.

- Advertisement -

ಬಾಂಗ್ಲಾದೇಶಕ್ಕೆ ಅಸ್ಸಾಂ ಮೂಲಕ ಗೋ ಕಳ್ಳಸಾಗಣೆಯನ್ನು ತಡೆಯಲು ಈ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಅಸ್ಸಾಂಗೆ ಅಥವಾ ಅಸ್ಸಾಂನಿಂದ ಹೊರ ರಾಜ್ಯಕ್ಕೆ ಜಾನುವಾರುಗಳನ್ನು ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದೆ. ಅಸ್ಸಾಂನಲ್ಲಿ ಗೋಮಾಂಸ ಮಾರಾಟವನ್ನು ಮಿತಿಗೊಳಿಸಲಾಗುವುದು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

ಹಿಂದೂಗಳು, ಸಿಖ್ಖರು, ಜೈನರು ಮತ್ತು ಇತರ ಗೋಮಾಂಸ ಸೇವಿಸದ ಸಮುದಾಯಗಳು ವಾಸಿಸುವ ಪ್ರದೇಶಗಳಲ್ಲಿ ಅಥವಾ ಹಿಂದೂ ದೇವಾಲಯದ 5 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗೋಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ನಿಬಂಧನೆಗಳನ್ನು ಉಲ್ಲಂಘಿಸಿದವರಿಗೆ ಮೂರರಿಂದ ಎಂಟು ವರ್ಷಗಳ ಜೈಲು ಶಿಕ್ಷೆ ಮತ್ತು 3 ಲಕ್ಷದಿಂದ 5 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

Join Whatsapp