ಮಾಲಿನ್ಯ ಮಂಡಳಿಯ ಅಧಿಕಾರಿ ವರ್ಗಾವಣೆಗೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ?: ಸಿದ್ದರಾಮಯ್ಯ ಪ್ರಶ್ನೆ

Prasthutha|

ಬೆಂಗಳೂರು: ಮಾಲಿನ್ಯ ಮಂಡಳಿಯ ಅಧಿಕಾರಿ ವರ್ಗಾವಣೆಗೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -

ಕೃಷ್ಣರಾಜಸಾಗರ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಆರೋಪಿಸಿದ್ದ ಸುಮಲತಾ ಕುರಿತಾದ ಪ್ರಶ್ನೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸುಮಲತಾ ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆಯಾದರೂ ಸ್ಥಳಕ್ಕೆ ಹೋಗಿ ಪರಿಶೀಲಿಸಬೇಕಿತ್ತು ಎಂದರು.

KRS ಡ್ಯಾಂನ 20 ಕಿಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಆರೋಪಿಸಿದ್ದಾರೆ. ಜೆಡಿಎಸ್ ನಾಯಕರ ಗಣಿಗಳು ಸಹ ಇವೆ ಎಂದು ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದೆ. ಹೀಗಾಗಿ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಸುಮಲತಾ ಅಂಬರೀಷ್ ಸೋಲಿಸಿದ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅರೋಪಿಸಿದ್ದಾರೆ.



Join Whatsapp