ಕಾಸರಗೋಡು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಕೆ.ಸುಂದರ ಅವರಿಗೆ ನಾಮಪತ್ರ ಹಿಂಪಡೆಯಲು ಲಂಚ ನೀಡಿದ ಪ್ರಕರಣದಲ್ಲಿ ದೂರುದಾರ ಅಲುವಾ ಮೂಲದ ಪಿ.ಕೆ.ಸುರೇಶ್ ಕುಮಾರ್ ಅವರಿಂದ ಕ್ರೈಂ ಬ್ರಾಂಚ್ ಪೊಲೀಸರು ಹೇಳಿಕೆಯನ್ನು ಪಡೆದಿದ್ದಾರೆ.
ಕಾಸರಗೋಡು ಜಿಲ್ಲಾ ಕ್ರೈಮ್ ಬ್ರಾಂಚ್ ಕಚೇರಿಯಲ್ಲಿ ದೂರುದಾರನ ಹೇಳಿಕೆ ಪಡೆಯಲಾಗಿದೆ. ಲಂಚ ಪ್ರಕರಣದ ಆರೋಪಿಯಾಗಿರುವ ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಪಿ.ಕೆ.ಸುರೇಶ್ ಕುಮಾರ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ದೂರು ನೀಡಿದ್ದರು. ದೂರಿಗೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್ ಪೊಲೀಸರು ಪಿ.ಕೆ.ಸುರೇಶ್ ಕುಮಾರ್ ಅವರ ಹೇಳಿಕೆಯನ್ನು ಪಡೆದಿದ್ದಾರೆ.