ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾಕ್ಕೆ ವೆಲ್ಫೇರ್ ಪಾರ್ಟಿ ಒತ್ತಾಯ

Prasthutha|

ಬೆಂಗಳೂರು: ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾಕ್ಕೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್, ರಾಜ್ಯದಲ್ಲಿ ಬಡ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬ್ಯಾಂಕುಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಾರೆ. ಕೋವಿಡ್ನಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೂ ಅಡಚಣೆ ಉಂಟಾಗಿದೆ. ಪೋಷಕರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಸಾಲಮನ್ನಾ ಮಾಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

ಕಳೆದ ಎರಡು ವಷ೯ಗಳಿಂದ ವಿದ್ಯಾರ್ಥಿಗಳು ಸರಿಯಾದ ಶಿಕ್ಷಣ ಪಡೆಯದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪೋಷಕರು ಸಹ ಉದ್ಯೋಗ, ವ್ಯಾಪಾರ ಇಲ್ಲದೇ ಒಪ್ಪತ್ತಿನ ಊಟಕ್ಕೂ ಕುಟುಂಬ ಪಾಲನೆ ಮಾಡಲು ಪರದಾಡುತ್ತಿದ್ದಾರೆ. ಇದರೆಲ್ಲರ ನಡುವೆ 3ನೇ ಅಲೆಯ ಆತಂಕವೂ ಪೋಷಕರನ್ನು ಕಾಡುತ್ತಿದೆ. ಇಂತಹ ಸಂದಭ೯ದಲ್ಲಿ ಶಿಕ್ಷಣಕ್ಕಾಗಿ ಪಡೆದ ಸಾಲ ತೀರಿಸಲು ಬ್ಯಾಂಕಿನಿಂದ ನೋಟಿಸ್ ಬರುತ್ತಿದ್ದು ಪೋಷಕರ ಗಾಯದ ಮೇಲೆ ಬರೆ ಬಿಳುವಂತಿದೆ. ಪೋಷಕರ ಜೊತೆ ವಿದ್ಯಾರ್ಥಿಗಳು ಸಹ ಆಥಿ೯ಕ ಸಂಕಷ್ಟಕ್ಕೆ ಸಿಲುಕಿ ಶಿಕ್ಷಣದ ಮೇಲೆ ಕೆಟ್ಟ ಪರಿಣಾಮ ಬಿರುವ ಸಾಧ್ಯತೆ ಇದೆ. ಕೂಡ ಲೇ ಸರಕಾರ ಬ್ಯಾಂಕಿನ ವ್ಯವಸ್ಥಾಪಕರ ಜೊತೆ ಚಚಿ೯ಸಿ ಸಾಲ ಮನ್ನಾ ಮಾಡಲು ಮುಂದಾಗಬೇಕು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.



Join Whatsapp