ಪ್ರಾಣಿಗಳಿಗೆ ಹಿಂಸೆ ನೀಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

Prasthutha|

ಮಂಗಳೂರು: ಮಂಗಳೂರು ಕೋವಿಡ್-19 ಸೋಂಕು ಅಥವಾ ಇನ್ನಿತರ ಯಾವುದೇ ಕಾರಣಗಳಿಂದಾಗಿ ಸಾಕು ಪ್ರಾಣಿ ಹಾಗೂ ಪಕ್ಷಿಗಳ ಪೋಷಣೆ – ರಕ್ಷಣೆ ನಿಲ್ಲಬಾರದು, ಅವುಗಳ ಪೋಷಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು.

- Advertisement -

ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯಲ್ಲಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿರುವುದು ಕಂಡುಬರುತ್ತಿದ್ದು, ಅಂತಹ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆಗೆ ಪ್ರಾಣಿ ದಯಾ ಸಂಘವು ಕಾರ್ಯನಿರ್ವಹಿಸುವುದರೊಂದಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ಪ್ರಾಣಿ ಹಿಂಸೆಗಳ ದುಷ್ಟರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಪ್ರಾಣಿಗಳನ್ನು ಮಾರಾಟ ಮಾಡುವುದು ಅಥವಾ ಕೊಲ್ಲುವುದು ಕಂಡುಬಂದಲ್ಲಿ ಪ್ರಾಣಿ ದಯಾ ಸಂಘದ ಸದಸ್ಯರು ಪ್ರಕರಣ ದಾಖಲಿಸಬೇಕು, ಗೋಶಾಲೆ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು, ಜಿಲ್ಲೆಯಲ್ಲಿ ಪ್ರತೀ ಗ್ರಾಮದಲ್ಲಿ ಗೋಮಾಳ ನಿರ್ಮಿಸಿ ಅದರ ನಿರ್ವಹಣೆಯನ್ನು ಸ್ಥಳೀಯ ದೇವಸ್ಥಾನಗಳಿಗೆ ನೀಡಬೇಕು, ಅದಕ್ಕೆ ಸಂಬಂಧಿಸಿದ ಖರ್ಚು-ವೆಚ್ಚವನ್ನು ಜಿಲ್ಲಾಡಳಿತದ ವತಿಯಿಂದ ಭರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.



Join Whatsapp