ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾ ಕಾರಣದಿಂದ ಸ್ಥಗಿತಗೊಂಡಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಸಿಬಿಎಸ್ಇ ಮಾದರಿಯಲ್ಲಿ ಎಸ್ಎಸ್ಎಲ್ಸಿ, ಪಿಯು ಅಂಕ ಪರಿಗಣಿಸಿ ಫಲಿತಾಂಶ ನೀಡಲು ಸಿದ್ಧತೆ ಕೈಗೊಳ್ಳಲಾಗಿದ್ದು, ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ಫಲಿತಾಂಶ ಹೊರಬೀಳಲಿದ್ದು, ಜುಲೈ 20 ರಂದು ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಫಲಿತಾಂಶದ ಬಗ್ಗೆ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ಈ ಬಾರಿ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ವ್ಯವಸಸ್ಥಿತವಾಗಿ ಫಲಿತಾಂಶ ನೀಡಲಾಗುವುದು ಎಂದು ಹೇಳಿದೆ. ಈ ಬಾರಿ ಯಾವುದೇ ರ್ಯಾಂಕ್ ಇರುವುದಿಲ್ಲ. ಗ್ರೇಡ್ ಬದಲು, ಅಂಕಗಳ ಆಧಾರದಲ್ಲೇ ಫಲಿತಾಂಶವಿರಲಿದೆ. ಸಿಬಿಎಸ್ಇ ಮಾದರಿಯಲ್ಲಿ ಎಸ್ಎಸ್ಎಲ್ಸಿ, ಪಿಯು ಅಂಕ ಪರಿಗಣಿಸಿ ಪ್ರಕಟಿಸಲಾಗುವುದು. ಎಸ್ಎಸ್ಎಲ್‌ಸಿ ಮೊದಲ ಪರೀಕ್ಷೆ ಮರುದಿನವೇ ಪಿಯು ಫಲಿತಾಂಶ ನೀಡಲು ನಿರ್ಧರಿಸಲಾಗಿದ್ದು, ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ ಎಂದು ತಿಳಿಸಿದೆ.