ಸೌದಿಯಲ್ಲಿ ನಮಾಝ್ ಸಮಯದಲ್ಲೂ ಅಂಗಡಿ ತೆರೆಯಲು ಅನುಮತಿ

Prasthutha|

ರಿಯಾದ್: ಕೋವಿಡ್ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ನಮಾಝ್ ಸಮಯದಲ್ಲಿ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

- Advertisement -

ಕೋವಿಡ್ ಹರಡುವುದನ್ನು ತಡೆಗಟ್ಟಲು ಮಾರಾಟಗಾರರು ಹಾಗೂ ಗ್ರಾಹಕರ ಆರೋಗ್ಯ ಮತ್ತು ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಫೆಡರೇಶನ್ ಆಫ್ ಸೌದಿ ಚೇಂಬರ್ಸ್ ಸುತ್ತೋಲೆಯಲ್ಲಿ ತಿಳಿಸಿದೆ. ನಮಾಝ್ ಸಮಯವನ್ನು ಒಳಗೊಂಡಂತೆ ಕೆಲಸದ ಅವಧಿಯಲ್ಲಿ ವಾಣಿಜ್ಯ ಸಂಸ್ಥೆಗಳು ಕಾರ್ಯನಿರ್ವಹಿಸಬಹುದು.  ನಮಾಝ್ ಸಮಯದಲ್ಲಿ ಮುಚ್ಚಿದ ಕಾರಣ ಅಂಗಡಿಗಳಲ್ಲಿ ಜನದಟ್ಟಣೆ ಉಂಟಾಗುತ್ತಿದ್ದು, ಇದನ್ನು ತಪ್ಪಿಸುವ ಮೂಲಕ ಸೇವೆಗಳ ಗುಣಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಫೆಡರೇಶನ್ ತಿಳಿಸಿದೆ.

ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಅಗತ್ಯ ಚರ್ಚೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡುವ ಗ್ರಾಹಕರಿಗೆ ಮತ್ತು ಕಾರ್ಮಿಕರಿಗೆ ಸಂಸ್ಥೆಗಳಲ್ಲಿ ನಮಾಝ್ ಸೌಲಭ್ಯವನ್ನು ಒದಗಿಸಬೇಕು ಎಂದು ಫೆಡರೇಶನ್ ಸುತ್ತೋಲೆಯಲ್ಲಿ ತಿಳಿಸಿದೆ.

- Advertisement -

ಸೌದಿಯಲ್ಲಿ ಇದುವರೆಗೂ ಐದು ಬಾರಿಯ ನಮಾಝ್ ಸಮಯದಲ್ಲಿ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತಿತ್ತು .



Join Whatsapp