NEP ಯು ಹಿಂದುಳಿದ ಸಮುದಾಯಗಳನ್ನು ಶಿಕ್ಷಣದಿಂದ ವಂಚಿಸಲು ಮಾಡಿದ ಕರಡು ಪ್ರತಿ: ಶಿವಸುಂದರ್

Prasthutha|

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಕ್ಯಾಂಪಸ್ ಫ್ರಂಟ್ ‘ಅಂತರಂಗ ಮತ್ತು ಬಹಿರಂಗ’ ಕಾರ್ಯಾಗಾರ

- Advertisement -

ಬೆಂಗಳೂರು: ಹೊಸ ರಾಷ್ಟೀಯ ಶಿಕ್ಷಣ ನೀತಿ “ಅಂತರಂಗ ಮತ್ತು ಬಹಿರಂಗ” ಎಂಬ ಕಾರ್ಯಾಗಾರವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಬೆಂಗಳೂರಿನ ಇಂಡಿಯನ್ ಸೋಶಿಯಲ್ ಇನ್ಸಿಟ್ಯೂಟ್ ನಲ್ಲಿ ನಡೆಸಿತು.

- Advertisement -


ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳನ್ನು ಶಿಕ್ಷಣದಿಂದ ವಂಚಿಸಲು ಮಾಡಿದ ಕರಡು ಪ್ರತಿಯಾಗಿದೆ ಹಾಗೂ ಈ ಹೊಸ ನೀತಿಯಿಂದ ಶಿಕ್ಷಣ ಮೊಟಕುಗೊಳಿಸುವವರ ಸಂಖ್ಯೆ ಹೆಚ್ಚಾಗುವುದರೊಂದಿಗೆ ಶಿಕ್ಷಕರು ಕೂಡ ಉದ್ಯೋಗ ಕಳೆದುಕೊಳ್ಳುವ ಸಂಭವ ಹೆಚ್ಚಿದೆ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಾಮಾಜಿಕ ಚಿಂತಕರಾದ ಶಿವಸುಂದರ್ ರವರು ಅಭಿಪ್ರಾಯಪಟ್ಟಿದ್ದಾರೆ.


ಹೊಸ ರಾಷ್ಟೀಯ ಶಿಕ್ಷಣ ನೀತಿಯು ಕೇಂದ್ರೀಕರಣ , ಕೇಸರೀಕರಣ ಹಾಗೂ ಖಾಸಗೀಕರಣಕ್ಕೆ ಒತ್ತು ನೀಡುವ ಒಂದು ಕರಡು ಪ್ರತಿಯಾಗಿದ್ದು , ದೇಶದ ಭವಿಷ್ಯದ ಮೇಲೆ ತೀವ್ರ ಪರಿಣಾಮ ಬೀರಲಿದ್ದು ಇದರ ವಿರುಧ್ದ ಹೋರಾಟದ ಅಗತ್ಯತೆಯ ಕುರಿತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಸಮಿತಿ ಸದಸ್ಯರಾದ ಪಿ.ವಿ ಶುಹೈಬ್ ರವರು ವಿವರಿಸಿದರು.


ಹಿಂಬದಿ ಬಾಗಿಲಿನ ಮುಖಾಂತರ ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಇದೀಗ ಕರ್ನಾಟಕದಲ್ಲಿ ಜಾರಿ ಮಾಡಲು ಹೊರಟಿದ್ದು ಈ ಅಪ್ರಜಾಸತ್ತಾತ್ಮಕ ಹಾಗೂ ಒಕ್ಕೂಟ ವ್ಯವಸ್ಥೆಗೆ ಮಾರಕವಾದ ಈ ನೀತಿಯ ವಿರುಧ್ದ ಎಲ್ಲಾ ಸಮಾನ ಮನಸ್ಕರನ್ನು ಒಟ್ಟುಗೂಡಿಸಿಕೊಂಡು ಕರ್ನಾಟಕದಾದ್ಯಂತ ಜನಾಂದೋಲನವನ್ನು ಪ್ರಾರಂಭಿಸಲಿದ್ದೇವೆ ಎಂದು ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಹೇಳಿದರು.


ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಸ್ ಕುಂಬ್ರ, ಉಪಾಧ್ಯಕ್ಷರಾದ ರೋಶನ್ ನವಾಝ್, ಕಾರ್ಯದರ್ಶಿಗಳಾದ ಸರ್ಫರಾಝ್ ಗಂಗಾವತಿ, ಅಲ್ತಾಫ್ ಹೊಸಪೇಟೆ, ಸಾಧಿಕ್ ಜಾರತ್ತಾರ್ ಹಾಗೂ ಬೆಂಗಳೂರು ಜಿಲ್ಲಾಧ್ಯಕ್ಷ ಆಕಿಬ್ ಬೆಂಗಳೂರು , ರಾಜ್ಯ ಸಮಿತಿ ಸದಸ್ಯರು, ವಿವಿಧ ಜಿಲ್ಲೆಯ ನಾಯಕರು ಉಪಸ್ಥಿತರಿದ್ದರು. ರಾಜ್ಯ ಸಮಿತಿ ಸದಸ್ಯೆ ಮುರ್ಶಿದಾ ಮಂಗಳೂರು ಕಾರ್ಯಕ್ರಮ ನಿರೂಪಿಸಿದರು.



Join Whatsapp