ಸಕಲೇಶಪುರ ಬಳಿ ಹೆದ್ದಾರಿಯಲ್ಲಿ ಭೂ ಕುಸಿತ

Prasthutha|

ಸಕಲೇಶಪುರ, ಜು.22: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಎಂಬಲ್ಲಿ ಭೂ ಕುಸಿತವಾಗಿದೆ.
ಗೋಣಿಗಾಲ್ ಬಳಿ ರಸ್ತೆಯ ಒಂದು ಕಡೆ ಭಾರೀ ಕುಸಿತ ಉಂಟಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

- Advertisement -


ಹಾಸನ ಜಿಲ್ಲೆಯ ವಿವಿಧೆಡೆ ಮಳೆಯ ಆರ್ಭಟ ಮುಂದುವರಿದಿದೆ. ಹಾಸನ, ಸಕಲೇಶಪುರ, ಅರಕಲಗೂಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಭೂ ಕುಸಿತವಾಗಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ರಸ್ತೆಯ ಕೆಳಭಾಗದಲ್ಲಿ ಹೊಸ ರಸ್ತೆ ನಿರ್ಮಾಣವಾಗುತ್ತಿದ್ದು, ಇದರ ಕಾಮಗಾರಿಯಿಂದಾಗಿ ಭೂ ಕುಸಿತ ಉಂಟಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.



Join Whatsapp