ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ: ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರು ಬರದಂತೆ ಜಿಲ್ಲಾಡಳಿತ ಮನವಿ

Prasthutha|

ಚಿಕ್ಕಮಗಳೂರು, ಆ, 2: ಕೊರೋನಾ ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರು ಬರದಂತೆ ಜಿಲ್ಲಾಡಳಿತ ಮನವಿ ಮಾಡಿದೆ.

- Advertisement -

ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಕೇರಳ, ಮಹಾರಾಷ್ಟ್ರಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿ. ಹೀಗಾಗಿ, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ನಿಯಂತ್ರಣ ಅನಿವಾರ್ಯ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ.

ಅಲ್ಲದೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪ್ರವಾಸಿಗರಲ್ಲಿ ಸೋಂಕು ಪತ್ತೆಯಾದರೆ ಚಿಕಿತ್ಸೆಯೂ ಕಷ್ಟ. ಈ ನಿಟ್ಟಿನಲ್ಲಿ ಪ್ರವಾಸಿಗರು ತಮ್ಮ ಪ್ರವಾಸ ಮುಂದೂಡುವುದು ಒಳ್ಳೆಯದು. ಪ್ರವಾಸಿಗರ ಭೇಟಿಗೆ 72 ಗಂಟೆಯೊಳಗಿನ ಆರ್ ಟಿ ಪಿ ಸಿ ಆರ್ ನೆಗೆಟಿವ್ ವರದಿ ಕಡ್ಡಾಯ. ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ.

- Advertisement -

ಪ್ರವಾಸ ಮೊಟಕುಗೊಳಿಸಿ ಜಿಲ್ಲಾಡಳಿತಕ್ಕೆ ಸಹಕರಿಸಲು ಮನವಿ ಮಾಡಲಾಗಿದೆ. ಜಿಲ್ಲೆಯ ವಿವಿಧೆಡೆ ಐದು ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ.



Join Whatsapp