ಪೆಗಾಸಸ್ ಹಗರಣ| ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋದ ಪತ್ರಕರ್ತರು

Prasthutha|

ಹೊಸದಿಲ್ಲಿ: ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಸುವಂತೆ ಐವರು ಸಂತ್ರಸ್ತ ಪತ್ರಕರ್ತರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಪತ್ರಕರ್ತರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

- Advertisement -

ಪೆಗಾಸಸ್ ತಮ್ಮ ಫೋನಿನಲ್ಲಿ ಸೋರಿಕೆ ನಡೆಸಿರುವುದು ವಿಧಿವಿಜ್ಞಾನ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹಾಗಾಗಿ ಸುಪ್ರೀಂ ಕೋರ್ಟ್ ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ಪೆಗಾಸಸ್ ಅನ್ನು ಖರೀದಿಸಲಾಗಿರುವ ಬಗ್ಗೆಯೂ ಬಹಿರಂಗಪಡಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಲು ಅರ್ಜಿಯಲ್ಲಿ ಕೋರಲಾಗಿದೆ.

ಪೆಗಾಸಸ್ ಹಗರಣದ ಸಂತ್ರಸ್ತರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಇದೇ ಮೊದಲು. ಈ ಕುರಿತು ತನಿಖೆ ನಡೆಸುವಂತೆ ಕೋರಿ ಈ ಹಿಂದೆ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿತ್ತು. ನ್ಯಾಯಾಲಯವು ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ಪರಿಗಣಿಸಲಿದೆ.



Join Whatsapp