ನಮ್ಮ ಅನುಮತಿ ಇಲ್ಲದೆ ಮೇಕೆದಾಟಿನಲ್ಲಿ ಡ್ಯಾಂ ಕಟ್ಟಲಾಗದು| ಕರ್ನಾಟಕಕ್ಕೆ ಅಣ್ಣಾಮಲೈ ಸವಾಲು

Prasthutha|

ಬೆಂಗಳೂರು : ತಮಿಳುನಾಡಿನ ಸಮ್ಮತಿ ಇಲ್ಲದೆ ಮೇಕೆದಾಟಿನಲ್ಲಿ ಕರ್ನಾಟಕವು ಅಣೆಕಟ್ಟು ನಿರ್ಮಾಣ ಮಾಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವು ತಮಿಳುನಾಡನ್ನು ಬಿಟ್ಟುಕೊಡುವುದಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ, ಅಣ್ಣಾಮಲೈ ಹೇಳಿದ್ದಾರೆ.

- Advertisement -

ಮಾಧ್ಯಮಗಳಿಗೆ ನೀಡಿರುವ ಸಂದರ್ಶನದಲ್ಲಿ ಅಣ್ಣಾಮಲೈ ಅವರು ತಮ್ಮ ರಾಜಕೀಯ ಜೀವನ, ತಮಿಳುನಾಡಿನಲ್ಲಿ ಬಿಜೆಪಿ ಸಂಘಟನೆ ಬಗ್ಗೆ ಮಾತನಾಡಿದ್ದಾರೆ. ಆದರೆ, ಮೆಕೆದಾಟು ಜಲಾಶಯದ ಕುರಿತ ಅವರ ಅಭಿಪ್ರಾಯಗಳನ್ನು ಮಾತ್ರ ಇಲ್ಲಿ ದಾಖಲಿಸಲಾಗಿದೆ.

ತಮಿಳುನಾಡು ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ನಾವು ಯೋಜನೆಯನ್ನು ವಿರೋಧಿಸುತ್ತೇವೆ. ಅದೇ ನಮ್ಮ ನಿಲುವು. ಮೇಕದಾಟು ಜಲಾಶಯ ಯೋಜನೆ ವಿವಾದ 2017ರಿಂದಲೂ ಸುಪ್ರೀಂ ಕೋರ್ಟ್‌ನಲ್ಲಿದೆ. ಅಲ್ಲದೆ, ಸುಪ್ರೀಂ ಕೋರ್ಟ್‌ನ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳೂ ಸ್ಪಷ್ಟವಾಗಿವೆ. ನದಿ ಕೆಳಗಿನ ರಾಜ್ಯದ ಅನುಮತಿಯಿಲ್ಲದೆ ಯಾರೂ ಅಣೆಕಟ್ಟುಗಳನ್ನು ನಿರ್ಮಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಹೀಗಾಗಿ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ನಮ್ಮ ಅನುಮತಿ ಬೇಕು. ಇದಲ್ಲದೆ, ಅಣೆಕಟ್ಟು ನಿರ್ಮಿಸುವುದು ಮತ್ತು ಅದಕ್ಕೆ ಅನುಮತಿ ನೀಡುವುದು ಕರ್ನಾಟಕಕ್ಕೆ ಸಂಬಂಧಿಸಿದ ವಿಚಾರವಲ್ಲ. ಕೇಂದ್ರ ಸರ್ಕಾರದಿಂದ ಅನುಮತಿ ಸಿಗಬೇಕು. ಡ್ಯಾಂ ನಿರ್ಮಾಣವಾದರೆ, ಇಲ್ಲಿನ ರೈತರ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ ಎಂದ್ದಿದ್ದಾರೆ.



Join Whatsapp