ಬೆಂಗಳೂರು, ಆ.5: ಮಾಜಿ ಸಚಿವ ಜಮೀರ್ ಅಹಮದ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.