ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಶರದ್ ಪವಾರ್

Prasthutha|

ಬೆಂಗಳೂರು : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

- Advertisement -


ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಪವಾರ್ ಅವರು, ಕುಟುಂಬ ಸದಸ್ಯರೊಬ್ಬರ ವಿವಾಹ ಸಮಾರಂಭ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದ್ದಾರೆ.


ಮುಖ್ಯಮಂತ್ರಿಗಳಿಗೆ ಪವಾರ್ ಅಭಿನಂದನೆ ಸಲ್ಲಿಸಿದ್ದು, ಕೆಲಕಾಲ ರಾಜಕೀಯ ವಿಚಾರಗಳ ಕುರಿತಂತೆಯೂ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಪವಾರ್ ಅವರು ಇನ್ನೂ 4-5 ದಿನಗಳ ಕಾಲ ಬೆಂಗಳೂರಿನಲ್ಲೇ ಉಳಿಯಲಿದ್ದಾರೆ ಎನ್ನಲಾಗಿದೆ.



Join Whatsapp