ಬೆಂಗಳೂರು : 2020-21ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ.
ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿಯ ವೆಬ್ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.
ವಿದ್ಯಾರ್ಥಿಗಳು https://sslc.karnataka.gov.in ವೆಬ್ಸೈಟ್ನಿಂದ ಫಲಿತಾಂಶವನ್ನು ಪಡೆಯಬ ಹುದು ಎಂದು ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.