ಹಾಸನ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ಸಮೀಪದಲ್ಲಿ ನಡೆದಿದೆ. ಅರಸೀಕೆರೆ ನಿವಾಸಿ ನವಾಜ್(೨೭) ಕೊಲೆಯಾದ ದುರ್ದೈವಿ.ದುಷ್ಕರ್ಮಿಗಳು ನಿನ್ನೆ ತಡರಾತ್ರಿ ನವಾಜ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊಲೆಯ ಹಿಂದಿನ ಕಾರಣ ಈವರೆಗೂ ತಿಳಿದು ಬಂದಿಲ್ಲ ಎನ್ನಲಾಗಿದೆ.