2 ಶೇಕಡಾಕ್ಕಿಂತ ಕಡಿಮೆ ಪಾಸಿಟಿವ್ ದರ ಇರುವ ಜಿಲ್ಲೆಗಳಲ್ಲಿ ಆಗಸ್ಟ್ 23 ರಿಂದ ಶಾಲಾ – ಕಾಲೇಜು ಆರಂಭ: ಬೊಮ್ಮಾಯಿ ಘೋಷಣೆ

Prasthutha|

ಬೆಂಗಳೂರು: ರಾಜ್ಯದೆಲ್ಲೆಡೆ ಕೊರೋನ ಭೀತಿಯ ನಡುವೆ ಶಾಲಾ- ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಸಿ.ಎಮ್. ಬೊಮ್ಮಾಯಿ ಮಹತ್ವದ ಸೂಚನೆ ನೀಡಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸೋಂಕು ಶೇಕಡಾ 2ಕ್ಕಿಂತಲೂ ಕಡಿಮೆ ಪ್ರಮಾಣದ ಇರುವ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಕೊರೋನ ಪ್ರಕರಣ ಜಾಸ್ತಿಯಾದರೆ ಒಂದು ವಾರಗಳ ಕಾಲ ಶಾಲೆಗಳನ್ನು ಮುಚ್ಚುವ ಕುರಿತು ಸಂಬಂಧವಟ್ಟವರ ಜೊತೆ ಮಾತನಾಡಿದ್ದೇನೆ. ಶಾಲಾ ಶಿಕ್ಷಕರು ಮತ್ತು ಪೋಷಕರು ಕಡ್ಡಾಯವಾಗಿ ವಾಕ್ಸಿನ್ ಹಾಕಿಸಿರಬೇಕು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಜನತೆ ಕೊರೋನ 3ನೇ ಅಲೆಯ ಭೀತಿಯಲ್ಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿದಿನ 1300 ಹೊಸ ಪ್ರಕರಣ ಪತ್ತೆಯಾಗುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಇನ್ನೂ ಹೆಚ್ಚಿನ ಜಾಗ್ರತೆ ವಹಿಸಬೇಕು. ಕೋವಿಡ್ 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಮಕ್ಕಳಿಗಾಗಿ ಬೆಂಗಳೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ. ಅದೇ ರೀತಿ ರಾಜ್ಯದೆಲ್ಲೆಡೆ ವ್ಯಾಕ್ಸಿನ್ ಅನ್ನು ಹೆಚ್ಚಿಸುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆಯೆಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.



Join Whatsapp