ಹಾಸನ: ಒಂದು ತಿಂಗಳಿನಿಂದ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಸಾರಿಗೆ ಬಸ್ಸ್, ಕಾರು, ಜೀಪು, ದ್ವಿಚಕ್ರ ವಾಹನಗಳು, ಹಾಗೂ 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅವಕಾಶ ನೀಡಿ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶಿಸಿದ್ದಾರೆ.
ಆದರೆ ಟ್ಯಾಂಕರ್ಸ್, ಕಂಟೇನರ್ ಹಾಗು ಬೃಹತ್ ವಾಹನಗಳಿಗೆ ಸಂಚಾರ ನಿಷೇಧ ಮುಂದುವರೆಯಲಿದೆ.
ಭಾರಿ ಮಳೆಯಿಂದ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ75 ರಲ್ಲಿ ರಸ್ತೆ ಕುಸಿತವಾಗಿತ್ತು. ಈ ಕಾರಣದಿಂದ ಕಳೆದ ಒಂದು ತಿಂಗಳಿನಿಂದ ಶಿರಾಡಿ ಘಾಟ್ನಲ್ಲಿ ವಾಹನ ಸಂಚಾರಕ್ಕೆ ನಿಷೇಧ ವಿಧಿಸಲಾಗಿತ್ತು.