ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ: ಸಚಿವ ರಾಜೀವ್ ಚಂದ್ರಶೇಖರ್

Prasthutha|

ಬೆಂಗಳೂರು: ಕೌಶಲ್ಯಾಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಭವಿಷ್ಯದಲ್ಲಿ ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

- Advertisement -


ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಂತರದ ಕಾಲಘಟ್ಟದಲ್ಲಿ ಯುವ ಸಮೂಹಕ್ಕೆ ಹೆಚ್ಚಿನ ಕೌಶಲ್ಯ ನೀಡುವ ಸವಾಲಿದ್ದು, ಇದನ್ನು ಸರ್ಕಾರ ಅತ್ಯಂತ ಯಶಸ್ವಿಯಾಗಿ ನಿಭಾಯಿಸಲಿದೆ. ಎಲೆಕ್ರ್ಟಾನಿಕ್ಸ್ ವಲಯದಲ್ಲಿ ಬೆಂಗಳೂರು ನಗರ ಮಹತ್ವದ ಸಾಧನೆ ಮಾಡಿದೆ. ಇದೇ ರೀತಿ ಮಾಹಿತಿ ತಂತ್ರಜ್ಞಾನ ವಲಯದಲ್ಲೂ ಹೆಚ್ಚಿನ ಅವಕಾಶಗಳಿವೆ ಎಂದರು.


ದೇಶದಲ್ಲಿ ಯುವ ಸಮೂಹದ ಕೌಶಲ್ಯಾಭಿವೃದ್ಧಿಗೆ 800 ಪ್ರಧಾನಿ ಕೌಶಲ್ಯ ಕೇಂದ್ರ, 20 ಸಾವಿರ ಅಲ್ಪಾವಧಿ ತರಗತಿ ಕೇಂದ್ರಗಳು, 14 ಸಾವಿರ ಐಟಿಐಗಳು, 2 ಸಾವಿರ ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ಜಾಲದ ಮೂಲಕ 2 ಕೋಟಿ ಯುವ ಸಮೂಹಕ್ಕೆ ತರಬೇತಿ ನೀಡಲಾಗುತ್ತಿದೆ ಎಂದರು. 6 ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಂಡಿದ್ದು, ಇದು ಅತ್ಯಂತ ಯಶಸ್ವಿಯಾಗಿದೆ. ಕಾರ್ಯಕರ್ತರು ಹಾಗೂ ಜನಸಮುದಾಯಕ್ಕೆ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸಲು ಸಹಕಾರಿಯಾಗಿದೆ ಎಂದು ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದರು.

- Advertisement -


ಪ್ರಧಾನಿ ನರೇಂದ್ರ ಮೋದಿ ಅವರು ಆದರ್ಶ ಭಾರತ ಪರಿಕಲ್ಪನೆ ಸಾಕಾರಗೊಳಿಸಲು ತಮ್ಮ ಸಚಿವಾಲಯಗಳು ಹೆಚ್ಚಿನ ಕೊಡುಗೆ ನೀಡಲಿವೆ. ಗ್ರಾಮೀಣ ಪ್ರದೇಶದಲ್ಲಿ ಅಂತರ್ಜಾಲ ವ್ಯವಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲಾಗಿುವುದು, ಸಣ್ಣ ನಗರಗಳಲ್ಲೂ ಐಟಿ ಪಾರ್ಕ್ ಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು. ಬಳಿಕ ಸಚಿವ ರಾಜೀವ್ ಚಂದ್ರಶೇಖರ್, ಬೆಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿ ವರಿಷ್ಠರೊಂದಿಗೆ ಚರ್ಚೆ ನಡೆಸಿದರು.



Join Whatsapp