ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಕಾಂಗ್ರೆಸ್ ಸೇರ್ಪಡೆ

Prasthutha|


ಬೆಂಗಳೂರು: ಜನಪರ ಹೋರಾಟಗಾರ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ ಎಸ್ ದ್ವಾರಕನಾಥ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಶುಕ್ರವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಡಾ.ಸಿ.ಎಸ್.ದ್ವಾರಕನಾಥ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.

- Advertisement -


ಈ ಹಿಂದೆ ಸಚಿವ ಶ್ರೀರಾಮುಲು ನೇತೃತ್ವದ ಬಿಎಸ್ ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ದ್ವಾರಕನಾಥ್ ಬಳಿಕ ತಟಸ್ಥರಾಗಿದ್ದರು. ವಕೀಲರಾಗಿಯೂ, ಬರಹಗಾರರಾಗಿಯೂ ಗುರುತಿಸಿಕೊಂಡಿರುವ ಅವರು, ಬಿಎಸ್ ಆರ್ ತೊರೆದು ಬಿಎಸ್ಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಬಿಎಸ್ಪಿಯಿಂದ 2019 ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.


ಸಿ.ಎಸ್ ದ್ವಾರಕನಾಥ್ ಅವರು ಅಹಿಂದ ಹೋರಾಟದ ಮೂಲ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ಬಳಿಕ ಸಿದ್ದರಾಮಯ್ಯ ಅವರು ಈ ಹೋರಾಟವನ್ನು ಮುಂದುವರಿಸಿದರು. ಸಿದ್ದರಾಮಯ್ಯ ಅವರ ರಾಜಕೀಯ ಯಶಸ್ಸಿಗೆ ಅಹಿಂದ ಹೋರಾಟ ಪ್ರಮುಖ ಪಾತ್ರ ವಹಿಸಿದೆ. ಆದರೆ ಸಿದ್ದರಾಮಯ್ಯ ಅವರ ಕೆಲವೊಂದು ನಡೆ ಸಿ.ಎಸ್ ದ್ವಾರಕನಾಥ್ ಅವರ ಅಸಮಾಧಾನಕ್ಕೂ ಕಾರಣವಾಗಿತ್ತು.



Join Whatsapp