ಜಂತರ್ ಮಂತರ್ ನಲ್ಲಿ ಮುಸ್ಲಿಮ್ ವಿರೋಧಿ ಘೋಷಣೆ: ಮತ್ತೊಬ್ಬ ಆರೋಪಿ ಉತ್ತಮ್ ಮಲಿಕ್ ಬಂಧನ

Prasthutha|

ನವದೆಹಲಿ: ಆಗಸ್ಟ್ 8 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಹಿಂದುತ್ವ ಗುಂಪು ಭಾರತ್ ಜೋಡೋ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಮುಸ್ಲಿಮ್ ವಿರೋಧಿ ಘೋಷಣೆ, ಕೋಮು ಪ್ರಚೋದನಾತ್ಮಕ ಹೇಳಿಕೆ ಮತ್ತು ಜನಾಂಗೀಯ ಹತ್ಯೆಗೆ ಕರೆ ನೀಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಉತ್ತಮ್ ಮಲಿಕ್ (ಅಲಿಯಾಸ್ ಉತ್ತಮ್ ಉಪಾಧ್ಯಾಯ) ನನ್ನು ಇಂದು ಬಂಧಿಸಿದ್ದಾರೆ.

- Advertisement -

ಮಾತ್ರವಲ್ಲದೆ ಪ್ರಕರಣದ ಇನ್ನೊಬ್ಬ ಆರೋಪಿ ಪಿಂಕಿ ಚೌಧರಿಯ ನಿರೀಕ್ಷಣಾ ಜಾಮೀನು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಲು ಮುಂದಾಗಿದ್ದಾರೆ. ಆದರೆ ಆತ ಪ್ರಸಕ್ತ ತಲೆಮರೆಸಿಕೊಂಡಿದ್ದಾನೆಂದು ಮಾಧ್ಯಮಗಳು ವರದಿ ಮಾಡಿವೆ.

ಘಟನೆಗೆ ಸಂಬಂಧಿಸಿದಂತೆ ಈ ಹಿಂದೆ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ, ಸುಶೀಲ್ ಕುಮಾರ್ ತಿವಾರಿ ಸೇರಿದಂತೆ 7 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಅವರು ಅಗಸ್ಟ್ 11 ರಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಪ್ರಸಕ್ತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉತ್ತಮ ಮಲಿಕ್ ಅವರನ್ನು ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪದಲ್ಲಿ ದೆಹಲಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.



Join Whatsapp