2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ: ಸಚಿವೆ ಶೋಭಾ ಕರಂದ್ಲಾಜೆ

Prasthutha|

ಬೆಂಗಳೂರು: 2023 ರ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯಲು ಸಾಕಷ್ಟು ವಾತಾವರಣ ಹೆಚ್ಚಾಗಿದೆ. 2023 ರ ವೇಳೆಗೆ ಕರ್ನಾಟಕ ಸಿರಿಧಾನ್ಯ ರಫ್ತು ಮಾಡುವಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ರಾಜ್ಯವಾಗಬೇಕು. ಎಲ್ಲಾ ದೇಶಗಳು ಈ ಪ್ರಸ್ತಾವನೆಯನ್ನು ಎಲ್ಲಾ ದೇಶಗಳು ಒಪ್ಪಿಕೊಂಡಿವೆ ಎಂದು ಕೇಂದ್ರದ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

- Advertisement -


ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ ಸಿರಿಧಾನ್ಯಕ್ಕೆ ಹೆಚ್ಚು ಒತ್ತು ನೀಡಲು ಹೆಚ್ಚು ಬೆಳೆಯಲು ಉತ್ತಮ ವಾತಾವರಣವಿದೆ. ಭಾರತದ ಸ್ವಾತಂತ್ರ್ಯೋತ್ಸವದ 75 ನೇ ವರ್ಷದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಎಲ್ಲಾ ತೋಟಗಾರಿಕಾ ಮತ್ತು ಆಹಾರಧಾನ್ಯಗಳ ರಫ್ತುದಾರರನ್ನು ಸೇರಿಸಿ ಸೆಪ್ಟೆಂಬರ್ 22 ರಂದು ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿದಂತೆ ರಫ್ತುದಾರರು ಇದರಲ್ಲಿ ಭಾಗವಹಿಸಲಿದ್ದಾರೆ. ಕರ್ನಾಟಕ ರಾಜ್ಯದ ಕೃಷಿ ಇಲಾಖೆ ಮಾಡಿದ ಮೊಬೈಲ್ ಬೆಳೆ ಆಪ್ ಸಮೀಕ್ಷೆ ಇಡೀ ದೇಶಕ್ಕೆ ಮಾದರಿಯಾಗಿದೆ.ಒಂದು ಜಿಲ್ಲೆಒಂದು ಉತ್ಪನ್ನ ಯೋಜನೆಗೆ ಒತ್ತು ನೀಡಿ ಗುಣಮಟ್ಟದ ಉತ್ಪಾದನೆ, ಸಂಗ್ರಹಣೆ, ಮಾರ್ಕೆಟಿಂಗ್, ಮಾರಾಟ ಮಾಡಲು ಪ್ರತಿಯೊಂದು ಜಿಲ್ಲೆಯಲ್ಲಿಯೂ ಕ್ಲಸ್ಟರ್ ಮಾಡಲು ನಿರ್ಧರಿಸಲಾಗಿದೆ ಎಂದರು.

ರೈತ ಕೃಷಿಯಲ್ಲಿ ಮುಂದುವರೆದು ಲಾಭದಾಯಕವಾಕಬೇಕು. ಕೃಷಿ ಜೀವನಾಧಾರ ಕಸುಬಾಗಿದ್ದು, ಒಟ್ಟು ಕೃಷಿಕರಲ್ಲಿ ಶೇ.80 ರಷ್ಟು ಸಣ್ಣ ಮತ್ತು ಮಧ್ಯಮ ಕೃಷಿಕರಿದ್ದಾರೆ. ಈ ಸಣ್ಣ ಮತ್ತು ಮಧ್ಯಮ ರೈತರು ನಗರಕ್ಕೆ ವಲಸೆ ಬರುವುದು ಹೆಚ್ಚಾಗುತ್ತಿದ್ದು, ಕಳೆದ 5-6 ವರ್ಷಗಳಲ್ಲಿ ಕೃಷಿಕನ ಬದುಕಿಗೆ ಒತ್ತು ಕೊಡಲು ಹಾಗೂ ರೈತನನ್ನು ರೈತರ ಆದಾಯ ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪದಂತೆ ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದೆ.

- Advertisement -


ಪೆಟ್ರೋಲ್ ಗೆ ಪರ್ಯಾಯವಾಗಿ ಎಥಿನಾಲ್ ಬಳಸಬಹುದಾಗಿದ್ದು, ಕರ್ನಾಟಕದಲ್ಲಿ ಮಂಡ್ಯ ಸೇರಿದಂತೆ ಬಹುತೇಕ ನೀರಾವರಿ ಪ್ರದೇಶದಲ್ಲಿ ಕಬ್ಬು ಬೆಳೆಯುತ್ತಿದ್ದು, ಸಕ್ಕರೆಯಿಂದ ಎಥಿನಾಲ್ ತಯಾರಿಸಲು ಒತ್ತು ನೀಡಲಾಗುತ್ತಿದ್ದೆ. 9. 5 ಬಿಲಿಯನ್ ಮೆಟ್ರಿಕ್ ಟನ್ ಸಕ್ಕರೆಯಿಂದ ಎಥಿನಾಲ್ ಮಾಡಲಾಗಿದೆ. ಅದರಂತೆ ಗೋಧಿ ಸೇರಿದಂತೆ ಬಹುತೇಕ ಧಾನ್ಯಗಳಿಂದಲೂ ಎಥಿನಾಲ್ ತಯಾರಿಸಬಹುದಾಗಿದೆ ಎಂದು ವಿವರಿಸಿದರು.


ರಾಜ್ಯ ಸರ್ಕಾರ ಅಭಿವೃದ್ಧಿ ಪಡಿಸಿರುವ ಯೋಜನೆಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು.ಆಂಧ್ರ ಪ್ರದೇಶದಲ್ಲಿ ಕೃಷಿ ಭರವಸಾ ಯೋಜನೆ ಜಾರಿ ಮಾಡಿದ್ದಾರೆ. ತಮಿಳುನಾಡಿನಲ್ಲಿ ತರಕಾರಿ ಮಾರಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಈ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು. ರಫ್ತು ಉದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ವಹಿಸಲಾಗುವುದು. ಒಳನಾಡಿನ ಮೀನುಗಾರಿಕೆಗೆ ಉತ್ತೇಜನ. ರೇಷ್ಮೆ ಬೆಳೆ ಉತ್ತೇಜನ, ರೇಷ್ಮೆಗೆ ಈ ಮಾರುಕಟ್ಟೆ ಜಾರಿಗೆ ತರಲು ತೀರ್ಮಾನ. ಶೇ 50 ರಷ್ಟು ರೈತರು ಇ ಪೇಮೆಂಟ್ ವ್ಯವಸ್ಥೆಗೆ ಅಳವಡಿಸಿಕೊಂಡಿದ್ದಾರೆ.57.ಕೋಟಿ ರೈತರಿಗೆ ನೇರವಾಗಿ ಅವರ ಅಕೌಂಟ್ ಗೆ ಬೆಳೆ ವಿಮೆ ಹಣ ತಲುಪಿಸಲಾಗಿದೆ. ದೇಶ ಇತಿಹಾಸದಲ್ಲಿ 320 ಲಕ್ಷ ಮೆಟ್ರಿಕ್ ಟನ್ ಆಹಾರ ಉತ್ಪಾದನೆ ಮಾಡಲಾಗಿದೆ. ಫುಡ್ ಪ್ರೊಸೆಸ್ಸಿಂಗ್ ಆಹಾರ ರಫ್ತು ಮಾಡಲು ಕೈಗಾರಿಕಾ ಇಲಾಖೆಯಲ್ಲಿ ಪ್ರತ್ಯೇಕ ವಿಂಗ್ ಮಾಡಲು ಮನವಿ ಮಾಡಿದ್ದೇನೆ. ಅವರೊಂದಿಗೆ ಚರ್ಚಿಸಲಾಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.


ಕೃಷಿಗೆ ಸಂಬಂಧಿಸಿದ ಕೆಲಸಗಳನ್ನು ಎನ್ ಆರ್.ಇಜಿ ಮೂಲಕ ಜಾರಿಗೆ ಆದ್ಯತೆ ನೀಡಲಾಗುವುದು.ಎಫ್ಪಿ ಒ ಗಳ ಮೂಲಕ ಕೃಷಿ ಉತ್ಪನ್ನಗಳ ಮಾರಾಟ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಫ್.ಪಿಒ 25 ವಿವಿಧ ರೀತಿಯ ಕ್ರಮಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.ಪ್ರವಾಹ ಪರಿಹಾರವಾಗಿ ಎನ್ ಡಿ ಆರ್ ಎಫ್ ಮೂಲಕ 630 ಕೋಟಿ ಬಿಡುಗಡೆ ಮಾಡಲಾಗಿದೆ. ಕೊರೊನಾ ದಿಂದ ಎರಡು ವರ್ಷ ಹಿನ್ನಡೆಯಾಗಿದೆ. ಕೊರೊನಾ.ಕಾರಣದಿಂದ ಸ್ವಲ್ಪ ಮುಂದೂಡಿಕೆಯಾಗಿದೆ.ರಸಗೊಬ್ಬರ ಬೆಲೆ ಹೆಚ್ಚಳವಾದರೂ ಕೇಂದ್ರ ಸರ್ಕಾರ ಸಬ್ಸಿಡಿ ಕೊಡುತ್ತಿದೆ. ಕೇಂದ್ರ ಸರ್ಕಾರ ಕೃಷಿಗೆ ಸಂಬಂಧಿಸಿದ ಮೂರು ಬಿಲ್ ಗಳ ಬಗ್ಗೆ ಬಹಳ ಸ್ಪಷ್ಟವಿದೆ. ಮೂವತ್ತು ವರ್ಷಗಳಿಂದ ಅನೇಕ ಸಮಿತಿಗಳು ನೀಡಿರುವ ವರದಿಗಳ ಆಧಾರದಲ್ಲಿ ಕಾಯ್ದೆಗಳನ್ನು ಜಾರಿಗೆ ಜಾರಿಗೆ ತರಲಾಗಿದೆ. ಸ್ವಾಮಿನಾಥನ್ ವರದಿ ಪ್ರಕಾರ ಎಪಿಎಂಸಿ ಯಲ್ಲಿ ರೈತರಿಗೆ ಅನ್ಯಾಯಗುತ್ತಿದೆ ಎಂದು ಹೇಳಿದ್ದಾರೆ. ರೈತರ ಜೊತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ಧವಿದೆ ಎಂದರು.



Join Whatsapp