ಬಿಜೆಪಿಯು ಮತ ಕೇಳುವ ನೈತಿಕ ಹಕ್ಕನ್ನು ಕಳೆದುಕೊಂಡಿದೆ: ಎಚ್‌.ಕೆ.ಪಾಟೀಲ್

Prasthutha|

ಹುಬ್ಬಳ್ಳಿ: ಬಿಜಪಿಯು ಜನರ ಬಳಿ ಮತ ಕೇಳುವ ನೈತಿಕ ಹಕ್ಕನ್ನು ಕಳೆದುಕೊಂಡಿದೆ ಎಂದು ಕಾಂಗ್ರೆಸ್ ಶಾಸಕ ಎಚ್.ಕೆ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ‘ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯು 10 ವರ್ಷ ಆಡಳಿತ ನಡೆಸಿದ್ದರೂ ಇನ್ನೂ ಅವಳಿ ನಗರ ಅಭಿವೃದ್ಧಿಯಾಗಿಲ್ಲ. ಅದರ ವೈಫಲ್ಯದ ಸಂಪೂರ್ಣ ಹೊಣೆ ಬಿಜೆಪಿಯೇ ಹೊರಬೇಕಾಗಿದ್ದು, ಜನರ ಬಳಿ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದೆ’ ಎಂದು ಅವರು ಹೇಳಿದರು.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅವಳಿ ನಗರದ ಕೆಲವು ವಾರ್ಡ್‌ಗಳಲ್ಲಿ ಅಭ್ಯರ್ಥಿಗಳ ಪರವಾಗಿ ಪಾದಯಾತ್ರೆ ನಡೆಸಿದಾಗ ರಸ್ತೆ, ಕುಡಿಯುವ ನೀರಿನ ಸೌಲಭ್ಯದ ಕುರಿತು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳಪೆ ಕಾಮಗಾರಿಯಿಂದ ಜನತೆ ಬೇಸತ್ತಿದ್ದು, ಇಷ್ಟು ವರ್ಷ ಆಡಳಿತ ನಡೆಸಿದ ಬಿಜೆಪಿ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ’ ಎಂದರು.

ಸರ್ಕಾರ ತೈಲ ಬೆಲೆ, ಅಡುಗೆ ಅನಿಲದ ಬೆಲೆ ಹೆಚ್ಚಳ ಮಾಡಿ, ಬಡವರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ. ಕೋವಿಡ್‌ ಸೋಂಕಿನಿಂದಾಗಿ ಉದ್ಯೋಗ ಕಳೆದುಕೊಂಡ ನಿರುದ್ಯೋಗಿಗಳು ಒಪ್ಪೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇದೇ ವೇಳೆ ಬಡವರಿಗೆ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿ ಪ್ರಮಾಣ ಕಡಿಮೆ ಮಾಡಿದೆ. ಕೇಂದ್ರ ಸರ್ಕಾರವು ಸಂಕಷ್ಟದ ಮೇಲೆ ಸಂಕಷ್ಟ ತಂದೊಡ್ಡಿ ಬಡವರ ಬದುಕನ್ನೇ ನಿರ್ನಾಮ ಮಾಡಲು ಹೊರಟಿದೆ’ ಎಂದು ಅವರು ಆರೋಪಿಸಿದ್ದಾರೆ.

Join Whatsapp