ನಾನು ರಾಜ್ಯಕ್ಕೆ ಮುಖ್ಯಮಂತ್ರಿ, ಕ್ಷೇತ್ರಕ್ಕೆ ಬಂದಾಗ ನಿಮ್ಮ ಬಸವರಾಜ: ಬೊಮ್ಮಾಯಿ

Prasthutha|

ಶಿಗ್ಗಾವಿ: ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ ದಕ್ಷತೆ, ಪ್ರತಿಭೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೆಚ್ಚುಗೆಯ ಮಾತುಗಳನ್ನಾಡಿದರು. ಬುಧವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಅವರು ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.

- Advertisement -


ರಾಜ್ಯದ ಜನತೆಗೆ ನಾನು ಮುಖ್ಯಮಂತ್ರಿ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ನಿಮ್ಮ ಬಸವರಾಜ ಬೊಮ್ಮಾಯಿ ಮಾತ್ರ. ನನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.


ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಕೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದಿನ ದಿನದಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲನ್ನು ತೆರೆಯಲಾಗುವುದು. ಗ್ರಾಮದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.



Join Whatsapp