ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಕಂಗನಾ ರಣಾವತ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

Prasthutha|

ಮುಂಬೈ: ನಟಿ ಕಂಗನಾ ರಣಾವತ್ ವಿರುದ್ಧ ಸಾಹಿತಿ ಜಾವೇದ್ ಅಖ್ತರ್ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.

- Advertisement -

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದಂತೆ ತನ್ನ ಹೆಸರನ್ನು ಎಳೆದು ತರುವ ಮೂಲಕ ರಣಾವತ್ ಅವರು ನನ್ನನ್ನು ವೈಯಕ್ತಿಕವಾಗಿ ತೇಜೋವಧೆ ಮಾಡಿದ್ದಾರೆಂದು ಅಖ್ತರ್ ಆರೋಪಿಸಿದ್ದರು. ಮಾತ್ರವಲ್ಲ ರಣಾವತ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯದಲ್ಲಿ ಹೂಡಿದ್ದರು.

ಇದರ ವಿರುದ್ಧ ಬಾಂಬೆ ಹೈಕೋರ್ಟ್ ನಲ್ಲಿ ದಾವೆ ಹೂಡಿದ ರಣಾವತ್, ತನ್ನ ಮೇಲಿನ ಪ್ರಕರಣವನ್ನು ಐಪಿಸಿ ಸೆಕ್ಷನ್ 482 ಅಡಿಯಲ್ಲಿ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿದ್ದರು. ಆದರೆ ನ್ಯಾಯಾಲಯ ರಣಾವತ್ ಅವರ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ನಟಿಗೆ ಸಂಕಷ್ಟ ಎದುರಾಗಿದೆ.

- Advertisement -

ವಕೀಲರಾದ ರಿಝ್ವಾನ್ ಸಿದ್ದೀಕ್ ಅವರು ರಣಾವತ್ ಪರ ನ್ಯಾಯಾಲಯದಲ್ಲಿ ವಾದವನ್ನು ಮಂಡಿಸಿದ್ದರು.



Join Whatsapp