ಕಾಂಗ್ರೆಸ್ ಮುಖಂಡನ ಶವ ಪತ್ತೆ; ಕೊಲೆ ಶಂಕೆ

Prasthutha|

ಚನ್ನಗಿರಿ: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

- Advertisement -

ಮೃತಪಟ್ಟ ವ್ಯಕ್ತಿಯನ್ನು 40 ವರ್ಷದ ಝೈನುಲ್ಲಾ ಖಾನ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ನಾಪತ್ತೆಯಾಗಿದ್ದ ಅವರ ಮೃತದೇಹ ಬಸವಾ ಪಟ್ಟಣದ ಗುಡ್ಡದಲ್ಲಿ ಪತ್ತೆಯಾಗಿದೆ.

ಬೆಸ್ಕಾಂ ಗುತ್ತಿಗೆದಾರರಾಗಿದ್ದ ಅವರು ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿದ್ದರು. ಘಟನಾ ಸ್ಥಳಕ್ಕೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Join Whatsapp