ಮುಂಬೈ : ಭೀಕರವಾಗಿ ಅತ್ಯಾಚಾರಕ್ಕೊಳಗಾಗಿದ್ದ ಸಂತ್ರಸ್ತೆ ಆಸ್ಪತ್ರೆಯಲ್ಲಿ ಸಾವು !

Prasthutha|

ಮುಂಬೈ: ವಾಣಿಜ್ಯ ನಗರಿ ಮುಂಬೈನ ಸಾಕಿನಾಕದ ಖೈರಾನಿ ಎಂಬಲ್ಲಿ ಅಮಾನುಷವಾಗಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಅತ್ಯಾಚಾರವೆಸಗಿದ ನಂತರ ಸಂತ್ರಸ್ತೆಯ ಖಾಸಗಿ ಭಾಗಗಳಿಗೆ ಕಬ್ಬಿಣದ ರಾಡ್ ಗಳನ್ನು ತೂರಿಸಿ ವಿಕೃತಿ ಮೆರೆಯಲಾಗಿತ್ತು. ಮುಂಜಾನೆ ಸುಮಾರು 3 ಗಂಟೆಗೆ ಅತ್ಯಾಚಾರ ನಡೆಸಲಾಗಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯ ನರಳಾಟವನ್ನು ಆಲಿಸಿ ಸ್ಥಳೀಯರು ಸಂತ್ರಸ್ತೆಯನ್ನು ಸಾಕಿನಾಕದ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಸಾಕಿನಾಕದ ಪೊಲೀಸರು ನಿನ್ನೆ ಐಪಿಸಿ ಸೆಕ್ಷನ್ 307, 376, 323, 504 ಅಡಿಯಲ್ಲಿ ಪ್ರಕರಣ ದಾಖಲಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದರು. ಆತನನ್ನು ಮೋಹನ್ ಚೌಹಾನ್ (45) ಎಂದು ಗುರುತಿಸಲಾಗಿದೆ. ಇಂದು ಸಂತ್ರಸ್ತೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp