ಸಿಎ ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಡಿಸಿಲ್ವಾ ಗೆ ದೇಶಕ್ಕೆ ಪ್ರಥಮ ರ‍್ಯಾಂಕ್

Prasthutha|

ಮಂಗಳೂರು : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ (ಚಾರ್ಟರ್ಡ್ ಅಕೌಂಟೆಂಟ್) ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ.  

- Advertisement -

ರುತ್‌ ಡಿಸಿಲ್ವಾ ಅವರು ರಾಷ್ಟ್ರ ಮಟ್ಟದಲ್ಲಿ ಪ್ರಥಮ ರ‍್ಯಾಂಕ್ ಪಡೆದ ಪ್ರಥಮ ಮಂಗಳೂರಿಗರಾಗಿದ್ದಾರೆ. ಈಕೆ ಮಂಗಳೂರಿನ ರೋಸಿ ಮಾರಿಯಾ ಡಿಸಿಲ್ವಾ ಮತ್ತು ರಫರ್ಟ್ ಡಿಸಿಲ್ವಾ ದಂಪತಿಯ ಪುತ್ರಿ. ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‍್ಯಾಂಕ್ ಪಡೆದ ರುತ್ ಇತಿಹಾಸ ಸೃಷ್ಟಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪರೀಕ್ಷೆಯನ್ನು ಎದುರಿಸಿದ್ದ ಆಕೆ ಛಲ ಬಿಡದೆ ಮತ್ತೆ ಪರೀಕ್ಷೆಯನ್ನು ಎದುರಿಸಿ ಸಾಧಿಸಿ ತೋರಿಸಿದ್ದಾರೆ ಎಂದು ಆಕೆಯ ಮಾರ್ಗದರ್ಶಕ ಹಾಗೂ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ (ಸಿಐಎಲ್)ನ ಸಂಚಾಲಕ ನಂದಗೋಪಾಲ್ ಹೇಳಿದ್ದಾರೆ.

ಮನೆಯಲ್ಲಿ ಸಂಭ್ರಮ

- Advertisement -

ಇನ್ನು ರುತ್ ಡಿಸಿಲ್ವಾ ಅವರ ಸಾಧನೆ ಆಕೆಯ ಮಾರ್ಗದರ್ಶಕರ ಜತೆಗೆ ಆಕೆಯ ಮನೆಯಲ್ಲಿಯೂ ಸಡಗರಕ್ಕೆ ಕಾರಣವಾಗಿದೆ. ಸಿಎ ಪರೀಕ್ಷೆಯ 3ನೆ ಪ್ರಯತ್ನದಲ್ಲಿಯೇ ರುತ್ ಡಿಸಿಲ್ವಾ ಅವರು ಪ್ರಥಮ ರ‍್ಯಾಂಕ್ ಪಡೆದಿರುವುದು ಮಂಗಳೂರಿಗೆ ಹೆಮ್ಮೆ ತರಿಸಿದೆ. ಪೋಷಕರು, ಮಾರ್ಗದರ್ಶಕರು ಹಾಗೂ ತರಬೇತುದಾರರು ರುತ್ ಅವರ ಸಾಧನೆಯನ್ನು ಅಭಿನಂದಿಸುತ್ತಿದ್ದು, ಮನೆಯಲ್ಲಿ ಸಡಗರ ನೆಲೆಮಾಡಿದೆ.ರುತ್ ಡಿಸಿಲ್ವಾರಿಗೆ ಸಿಎ ಬಗ್ಗೆ ತರಬೇತಿ ನೀಡಿರುವ ವಿವಿಯನ್ ಅವರು ಪ್ರತಿಕ್ರಿಯೆ ನೀಡಿ, ಆಕೆ ಸಂವಹನ ಕೌಶಲ್ಯ ಅತ್ಯುತ್ತಮವಾಗಿದ್ದು, ತನ್ನ ಸಾಮರ್ಥ್ಯದ ಬಗ್ಗೆ ದೃಢ ನಂಬಿಕೆಯನ್ನು ಆಕೆ ಹೊಂದಿರುವುದೇ ಆಕೆಯ ಈ ಸಾಧನೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

Join Whatsapp