ಹಿಂದಿಯಲ್ಲಿ ಮಾತನಾಡುವುದು ಹೆಮ್ಮೆಯ ವಿಷಯ: ಅಮಿತ್ ಶಾ

Prasthutha|

ನವದೆಹಲಿ: ದೇಶದ ನಾಗರಿಕರು ಮಾತೃಭಾಷೆಯೊಂದಿಗೆ ಹಿಂದಿಯನ್ನೂ ಕಲಿಯಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ಕರೆ ನೀಡಿದ್ದಾರೆ.

- Advertisement -


ನವದೆಹಲಿಯಲ್ಲಿ ‘ಹಿಂದಿ ದಿವಸ್ ಸಮಾರಂಭ 2021’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿಗಳು ಅಂತಾರಾಷ್ಟೀಯ ಮಟ್ಟದಲ್ಲಿ ಹಿಂದಿಯಲ್ಲಿ ಮಾತನಾಡಿದರೆ ಮುಜುಗರ ಪಡುವಂತಹ ದಿನಗಳು ಈಗಿಲ್ಲ. ಹಿಂದಿಯಲ್ಲಿ ಮಾತನಾಡುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.


ಜನರು ತಮ್ಮ ಮಾತೃಭಾಷೆಯೊಂದಿಗೆ ಅಧಿಕೃತ ಭಾಷೆಯಾಗಿ ಹಿಂದಿಯನ್ನು ಹಂತ ಹಂತವಾಗಿ ಬಳಸುವ ಪ್ರತಿಜ್ಞೆ ಮಾಡಬೇಕು. ಮಾತೃ ಭಾಷೆ ಹಾಗೂ ಅಧಿಕೃತ ಭಾಷೆಗಳ ಸಮನ್ವಯದಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎಂದಿದ್ದಾರೆ.



Join Whatsapp