ಟಿಎಂಸಿ ಸಂಸದೆ ಅರ್ಪಿತಾ ಘೋಷ್ ರಾಜ್ಯಸಭೆಗೆ ರಾಜೀನಾಮೆ!

Prasthutha|

ನವದೆಹಲಿ: ರಾಜ್ಯಸಭೆಗೆ ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ಅವರು ರಾಜೀನಾಮೆ ನೀಡಿದ್ದಾರೆ. ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ.

- Advertisement -

2019ರ ಲೋಕಸಭೆ ಚುನಾವಣೆಯಲ್ಲಿ ಬಲುರ್ಘಾಟ್‌ ಕ್ಷೇತ್ರದಲ್ಲಿ ಸೋಲು ಅನುಭವಿಸಿದ ಬಳಿಕ, ಅರ್ಪಿತಾ ಅವರನ್ನು 2020ರ ಮಾರ್ಚ್‌ ನಲ್ಲಿ ರಾಜ್ಯಸಭೆಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ನಾಮನಿರ್ದೇಶನ ಮಾಡಿತ್ತು.

ಅರ್ಪಿತಾ ಅವರ ಕಾರ್ಯವೈಖರಿ ಬಗ್ಗೆ ಟಿಎಂಸಿ ಪಕ್ಷಕ್ಕೆ ತೃಪ್ತಿ ಇರಲಿಲ್ಲ. ಹೀಗಾಗಿ, ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.



Join Whatsapp